ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಂತಾಮಣಿ | ಮೊದಲ ಕಾರ್ತೀಕ ಸೋಮವಾರ; ದೇಗುಲಗಳಿಗೆ ಭಕ್ತರ ದಂಡು

Published 20 ನವೆಂಬರ್ 2023, 14:49 IST
Last Updated 20 ನವೆಂಬರ್ 2023, 14:49 IST
ಅಕ್ಷರ ಗಾತ್ರ

ಚಿಂತಾಮಣಿ: ನಗರ ಹಾಗೂ ತಾಲ್ಲೂಕಿನಾದ್ಯಂತ ಮೊದಲ ಕಾರ್ತಿಕ ಸೋಮವಾರವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ನಗರದ ನಾಗನಾಥೇಶ್ವರ ದೇವಾಲಯ ಮತ್ತು ಅಜಾದ್‌ಚೌಕದ ಹರಿಹರೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾಗನಾಥೇಶ್ವರ ದೇವಾಲಯದಲ್ಲಿ ಬೆಳಿಗ್ಗೆಯಿಂದ ಸರತಿಯ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದರು.

ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಉಪ್ಪರಪೇಟೆ ಗ್ರಾಮದಲ್ಲಿನ ಸೃಷ್ಟೀಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆದವು. ಕೈವಾರದ ಭೀಮಲಿಂಗೇಶ್ವರ ದೇವಾಲಯದಲ್ಲಿ, ಮಹಾಕೈಲಾಸಗಿರಿ ಗುಹಾಂತರ ದೇವಾಲಯ, ಮುರುಗಮಲೆಯ ಮುಕ್ತೀಶ್ವರದೇವಾಲಯ, ಆಲಂಬಗಿರಿ ಸೇರಿದಂತೆ ಎಲ್ಲ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಕಾರ್ತಿಕ ಸೋಮವಾರದಂದು ಎಲ್ಲ ದೇವಾಲಯಗಳಿಗೂ ಜನಸಾಗರವೇ ಹರಿದುಬಂದಿತ್ತು.

ನಗರದ ಗಣಪತಿ ದೇವಾಲಯ, ಕನಂಪಲ್ಲಿ ಆಂಜನೇಯಸ್ವಾಮಿ, ಬೂರಗಮಾಕಲಹಳ್ಳಿ, ಕುರುಟಹಳ್ಳಿ ಆಂಜನೇಯ ದೇವಾಲಯ, ಜೋಡಿ ರಸ್ತೆಯಲ್ಲಿರುವ ಈಶ್ವರ ದೇವಾಲಯ ಮುಂತಾದ ದೇವಾಲಯಗಳಲ್ಲಿ ಸಂಭ್ರಮ ಮನೆ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT