ಸರ್ಕಾರಿ ಭೂಮಿಯಲ್ಲಿದ್ದ ಶಿಲುಬೆ ತೆರವು

ಗೌರಿಬಿದನೂರು: ತಾಲ್ಲೂಕಿನ ತೊಂಡೇಬಾವಿ ಹೋಬಳಿ ಕಲ್ಲಿನಾಯಕನಹಳ್ಳಿ ಸರ್ವೆ ನಂ. 106ರಲ್ಲಿನ ಗೋಕಾಡು ಗುಡ್ಡದ ಮೇಲೆ ಅಕ್ರಮವಾಗಿ ಸ್ಥಾಪಿಸಿದ್ದ ಏಸು ಶಿಲುಬೆಯನ್ನು ಜಿಲ್ಲಾಧಿಕಾರಿ ಆದೇಶದ ಮೇರೆಗೆ ತಾಲ್ಲೂಕು ಆಡಳಿತ ಶುಕ್ರವಾರ ತೆರವುಗೊಳಿಸಿತು.
ತಾಲ್ಲೂಕಿನಲ್ಲಿ ಕ್ರೈಸ್ತ ಮಿಷನರಿಗಳು ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಕಬಳಿಸುತ್ತಿದ್ದಾರೆ ವಿಶ್ವ ಹಿಂದೂ ಪರಿಷದ್ ಜೂ. 30ರಂದು ಜಿಲ್ಲೆಯಾದ್ಯಂತ ಪ್ರತಿಭಟನೆ
ನಡೆಸಿತ್ತು.
ಕಲ್ಲಿನಾಯಕನಹಳ್ಳಿ ಸಮೀಪದ ಗೋಕಾಡಿನಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ಶಿಲುಬೆಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ಬಜರಂಗದಳದ ರಾಷ್ಟ್ರೀಯ ಸಹ ಸಂಯೋಜಕ ಸೂರ್ಯನಟರಾಯಣ ತಾಲ್ಲೂಕಿಗೆ ಭೇಟಿ ನೀಡಿ ಕ್ರೈಸ್ತ ಮಿಷನರಿಗಳ ಭೂಕಬಳಿಕೆ ಪರಿಶೀಲಿಸಿ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದರು. ಜತೆಗೆ ಸಂಘ ಪರಿವಾರದ ಕಾರ್ಯಕರ್ತರು ಶಿಲುಬೆಯನ್ನು ತೆರವುಗೊಳಿಸುವ ವಿಚಾರವಾಗಿ ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದರು ಎಂದು ವಿಶ್ವ ಹಿಂದೂ ಪರಿಷತ್ ಪದಾಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.