ಸೋಮವಾರ, ಜೂನ್ 21, 2021
30 °C

ಚಿಕ್ಕಬಳ್ಳಾಪುರದ ಸಿಜೆಎಂ ಹಿರಿಯ ಶ್ರೇಣಿ ನ್ಯಾಯಾಲಯದ ಅಟೆಂಡರ್ ಅನುಮಾನಾಸ್ಪದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ನಗರದ ಸಿಜೆಎಂ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಮೈಸೂರು ಮೂಲದ ನವೀನ್ (32) ಎಂಬುವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವುದು ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಅವಿವಾಹಿತರಾಗಿರುವ ನವೀನ್‌ ಅವರು ಪ್ರಶಾಂತ್‌ ನಗರದಲ್ಲಿ ಕೆಎಸ್‌ಆರ್‌ಟಿ ಡಿಪೋ ಹಿಂಭಾಗದ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಅವರು ಕರ್ತವ್ಯಕ್ಕೆ ಹಾಜರಾಗದೆ, ಪೋನ್‌ ಕರೆಗಳನ್ನು ಸ್ವೀಕರಿಸದ ಕಾರಣಕ್ಕೆ ಅವರ ಸಹದ್ಯೋಗಿ ಒಬ್ಬರು ಅವರನ್ನು ಹುಡುಕಿಕೊಂಡು ಮಂಗಳವಾರ ಬೆಳಿಗ್ಗೆ ಮನೆ ಬಳಿಗೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕೊರಳಿಗೆ ಶರ್ಟ್‌ ಮತ್ತು ಪ್ಯಾಂಟ್ ಸುತ್ತಿಕೊಂಡು ಅಂಗಾತ ಮಲಗಿದ ಸ್ಥಿತಿಯಲ್ಲಿ ನವೀನ್‌ ಅವರ ಮೃತದೇಹ ಪತ್ತೆಯಾಗಿದೆ. ಅವರ ಕುಟುಂಬದವರಿಗೆ ಮಾಹಿತಿ ತಿಳಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ಬಳಿಕವಷ್ಟೇ ಸಾವಿನ ನಿಖರ ಕಾರಣ ಹೇಳಲು ಸಾಧ್ಯ ಎಂದು ಪೊಲೀಸರು ತಿಳಿಸಿದರು. 

ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಶ್ವಾನದಳ ಮತ್ತು ವಿಧಿ ವಿಜ್ಞಾನ ತಜ್ಞರೊಂದಿಗೆ ಬಂದು ಘಟನಾ ಸ್ಥಳ ಪರಿಶೀಲನೆ ನಡೆಸಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ.ಎನ್.ರೂಪಾ ಅವರು ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು