ಮಂಗಳವಾರ, ಡಿಸೆಂಬರ್ 7, 2021
27 °C

ಕಾಲುವೆಯಲ್ಲಿ ಪತ್ತೆಯಾದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಅಗಲಗುರ್ಕಿ ಗ್ರಾಮ ಹೊರವಲಯದ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯ ಕಾಲುವೆಯಲ್ಲಿ
ದೊರೆತ ಅಪರಿಚಿತ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಲುವೆಯಲ್ಲಿ ಬಿದಿದ್ದ ಅವರನ್ನು ಗ್ರಾಮಾಂತರ ಠಾಣೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ಸುಮಾರು 40 ವರ್ಷದ ಅವರು 168 ಸೆ.ಮೀ ಎತ್ತರ ಇದ್ದಾರೆ. ಗೋದಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ.

‌ಕಾಫಿ ಬಣ್ಣದ ಬನಿಯನ್, ಸಿಮೆಂಟ್ ಬಣ್ಣದ ನಿಕ್ಕರ್ ಧರಿಸಿದ್ದರು. ವಾರಸುದಾರರು ಇದ್ದಲ್ಲಿ ಚಿಕ್ಕಬಳ್ಳಾಪುರ ಎಸ್‌ಪಿ ಕಚೇರಿ 08156-275400 ಸಂಪರ್ಕಿಸಬಹುದು ಎಂದು ಡಿವೈಎಸ್‌ಪಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು