ಬಾಗೇಪಲ್ಲಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಎಲ್ಲ ಧರ್ಮ, ಜಾತಿ, ವರ್ಗದ ಮಹನೀಯರು ಭಾಗವಹಿಸಿ ತ್ಯಾಗ ಬಲಿದಾನ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದಿದ್ದಾರೆ ಎಂದು ತಹಶೀಲ್ದಾರ್ ಡಿ.ಎ.ದಿವಾಕರ್ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಭಾನುವಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು.

ಸ್ವಾತಂತ್ರ್ಯ ಚಳವಳಿ ಒಬ್ಬ ವ್ಯಕ್ತಿಯಿಂದ ನಡೆದ ಹೋರಾಟವಲ್ಲ. ರಾಜಕೀಯ ಹೋರಾಟವಾಗಿರದೇ, ಸಾಮಾಜಿಕ, ಆರ್ಥಿಕವಾದ ಹೋರಾಟ ಆಗಿದೆ. ಬ್ರಿಟೀಷ್ ಸಾಮ್ರಾಜ್ಯಶಾಹಿಯ ವಿರುದ್ಧ ಏಕಧ್ವನಿಯಾಗಿ ಹೋರಾಟ ನಡೆದಿದೆ ಎಂದರು.

ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಚಿನ್ನಕೈವಾರಮಯ್ಯ, ದೇಶಕ್ಕೆ ಸ್ವಾತಂತ್ರ್ಯ ಕಳೆದು 75 ವರ್ಷ ಕಂಡರೂ ದೇಶದಲ್ಲಿ ಇಂದಿಗೂ ಅಸಮಾನತೆ, ಬಡತನ, ನಿರುದ್ಯೋಗ, ಶೋಷಣೆ ಜೀವಂತ ಇದೆ. ಶಿಕ್ಷಣ, ಆರೋಗ್ಯ ಸಮರ್ಪಕವಾಗಿ ಸಿಗದೇ ವಂಚಿತರಾಗಿದ್ದಾರೆ
ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದಲ್ಲಿ ಕರಾಟೆಯಲ್ಲಿ ಭಾಗವಹಿಸಿದ ಕರಾಟೆಪಟುಗಳಿಗೆ ಗಣ್ಯರು ಪ್ರಶಸ್ತಿ ಪತ್ರ ವಿತರಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಸರ್ಕಲ್ ಇನ್ಸ್ಪೆಕ್ಟರ್ ಡಿ.ಆರ್.ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ತಾಲ್ಲೂಕು ದೈಹಿಕ ಪರಿವೀಕ್ಷಕ ಜಯರಾಂ, ರಾಮಲಿಂಗಾರೆಡ್ಡಿ, ಮಂಜುನಾಥ್, ಆರ್.ಹನುಮಂತರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.