ಗುರುವಾರ , ಅಕ್ಟೋಬರ್ 22, 2020
22 °C

ಮಹಾತ್ಮ ಗಾಂಧೀಜಿಯ ಆದರ್ಶ, ತತ್ವ ಇಂದಿಗೂ ಪ್ರಸ್ತುತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲ್ಲೂಕು ಕಚೇರಿಯಲ್ಲಿ ಮಹಾತ್ಮಗಾಂಧಿ ಮತ್ತು ಲಾಲ್ ಬಹದ್ದೂರ್‌ಶಾಸ್ತ್ರಿ ಅವರ ಜನ್ಮದಿನಾಚರಣೆ ನಡೆಯಿತು.

ತಹಶೀಲ್ದಾರ್ ಹನುಮಂತರಾಯಪ್ಪ ಇಬ್ಬರು ಮಹನೀಯರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಮಾತನಾಡಿ, ‘ಉಭಯರ ಜಯಂತಿಯನ್ನು ಶ್ರಮದಾನದ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸ್ಮರಿಸಲಾಗಿದೆ. ಮಹಾತ್ಮ ಗಾಂಧಿಯ ನೇತೃತ್ವದಲ್ಲಿ ಸ್ವಾತಂತ್ರ್ಯಪಡೆದ ದೇಶ ಇಂದು ಸ್ವತಂತ್ರವಾಗಿ ಆಡಳಿತ ನಡೆಸುತ್ತಿದೆ. ಅಂತಹ ಮಹಾತ್ಮನಿಗೆ ಕೃತಜ್ಞತೆ ಸಲ್ಲಿಸುವುದು ದೇಶದ ಪ್ರತಿಯೊಬ್ಬರ ಕರ್ತವ್ಯ’ ಎಂದರು.

‘ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗಾದೆಯಂತೆ ಲಾಲ್ ಬಹದ್ದೂರ್‌ ಶಾಸ್ತ್ರಿ ಅತ್ಯಂತ ಕಡಿಮೆ ಅವಧಿಯಲ್ಲಿ ದಕ್ಷ, ಪ್ರಾಮಾಣಿಕ ಹಾಗೂ ಅತ್ಯುತ್ತಮ ಆಡಳಿತ ನಡೆಸಿ ದೇಶದ ಪ್ರಗತಿಗೆ ಕಾರಣರಾಗಿದ್ದಾರೆ. ಇಬ್ಬರು ಮಹಾನ್ ವ್ಯಕ್ತಿಗಳ ಜನ್ಮ ದಿನಾಚರಣೆ ಒಟ್ಟಿಗೆ ಬಂದಿರುವುದು ಸ್ಮರಣೆಗೆ ಅನುಕೂಲವಾಗಿದೆ’ ಎಂದರು.

ಗ್ರೇಡ್-2 ತಹಶೀಲ್ದಾರ್ ಶೋಭಾ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ: ‘ಸ್ವಚ್ಛವಾದ ಪರಿಸರಕ್ಕೆ ಮಾತ್ರ ಸಕಲ ಜೀವರಾಶಿಯನ್ನು ಆರೋಗ್ಯವಾಗಿಡುವ ಪ್ರಬಲ ಶಕ್ತಿ ಇದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಜಿ.ಸುರೇಶಗೌಡ ತಿಳಿಸಿದರು.

ಗಾಂಧಿ ಜಯಂತಿ ಅಂಗವಾಗಿ ಕಚೇರಿ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗಾಂಧಿಜಿ ಸತ್ಯ, ಅಹಿಂಸೆಯ ಪ್ರತಿಪಾದನೆಯ ಜತೆಗೆ ಶ್ರಮದಾನಕ್ಕೆ ಆದ್ಯತೆ ನೀಡಿದ್ದರು. ಸ್ವತಃ ಚರಕ ಹಿಡಿದು ನೂಲು ತೆಗೆದು ತಮ್ಮ ಬಟ್ಟೆಯನ್ನು ತಾವೇ ತಯಾರಿಸಿಕೊಳ್ಳುವ ಮೂಲಕ ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಿದ್ದರು. ಅವರು ಇಲ್ಲದಿದ್ದರೂ ಆದರ್ಶವನ್ನು ನಮಗೆ ಬಿಟ್ಟು ಹೋಗಿದ್ದಾರೆ ಎಂದರು.

ಶಿಕ್ಷಕರ ಮುಖಂಡರಾದ ಕೆ.ಎನ್.ವಸಂತರೆಡ್ಡಿ, ಎಸ್.ಸುಬ್ಬಾರೆಡ್ಡಿ, ಮೂಡಲ ಗೊಲ್ಲಹಳ್ಳಿ ಕೆ.ನರಸಿಂಹಪ್ಪ, ಎನ್.ಗಂಗಾಧರ್, ಬೈರಾರೆಡ್ಡಿ, ಶಿನಪ್ರಸಾದ್, ಎಸ್.ಅಬ್ದುಲ್ ಬಷೀರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು