ಗುರುವಾರ , ಮೇ 13, 2021
16 °C

ಮಸೀದಿ ಮುಖ್ಯಸ್ಥರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಂಜಾನ್ ಆಚರಣೆ ಪ್ರಯುಕ್ತ ಮಸೀದಿಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲೆಯ ಎಲ್ಲ ಮಸೀದಿಗಳ ಅಧ್ಯಕ್ಷರು ಮತ್ತು ಸದಸ್ಯರ ಸಭೆ ಕರೆದು ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಪಾಷಾ ತಿಳಿಸಿದರು.

ಮುರುಗಮಲ್ಲಾ ದರ್ಗಾದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ದಿನ ದಿನವೂ ವೇಗವಾಗಿ ಹರಡುತ್ತಿದೆ. ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಮಸೀದಿಗಳಲ್ಲಿ ಮತ್ತು ದರ್ಗಾಗಳಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಜಾಗೃತಿ ಮೂಡಿಸಲಾಗುವುದು. ಜನರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಹಿಂದೂ ಮತ್ತು ಮುಸ್ಲಿಂ ಬಾಂಧವರ ಭಾವೈಕ್ಯ ಕೇಂದ್ರವಾಗಿರುವ ಮುರುಗಮಲ್ಲ ದರ್ಗಾಗೆ ಬರುವ ಭಕ್ತರು ಕೋವಿಡ್ ತಪಾಸಣೆ ಮಾಡಿಸಿಕೊಂಡು ಬರಬೇಕು. 10 ವರ್ಷದೊಳಗಿನ ಮಕ್ಕಳು ಮತ್ತು 60 ವರ್ಷ ಮೇಲ್ಪಟ್ಟವರಿಗೆ ದರ್ಗಾ ಪ್ರವೇಶ ನಿಷೇಧಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಜರ್ ಬಳಸಿ, ಕನಿಷ್ಠ ಅಂತರ ಕಾಪಾಡಬೇಕು. ರಂಜಾನ್ ಮಾಹೆಯಲ್ಲೂ ಭಕ್ತರಿಗೆ ದರ್ಗಾದಲ್ಲಿ ತಂಗಲು ಅವಕಾಶವಿಲ್ಲ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು