ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಸ್ ಕ್ವಿಜ್ ಪ್ರತಿಯೊಬ್ಬರಿಗೂ ಪ್ರಯೋಜನಕಾರಿ

‘ಪ್ರಜಾವಾಣಿ’ ನ್ಯೂಸ್‌ ಕ್ವಿಜ್ ಸ್ಪರ್ಧೆಯ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಆರ್.ಲತಾ
Last Updated 14 ಅಕ್ಟೋಬರ್ 2020, 18:12 IST
ಅಕ್ಷರ ಗಾತ್ರ

ಚಿಕ್ಕಬಳ್ಳಾ‍ಪುರ: ‘ಉತ್ತಮ ಗುಣಮಟ್ಟದ ಸುದ್ದಿಗಳನ್ನು ನೀಡುವಲ್ಲಿ ‘ಪ್ರಜಾವಾಣಿ’ ದಿನ ಪತ್ರಿಕೆಯು ಮುಂಚೂಣಿಯಲ್ಲಿದ್ದು, ಜನರ ವಿಶ್ವಾಸಾರ್ಹತೆಯನ್ನು ಗಳಿಸಿದೆ’ ಎಂದು ಜಿಲ್ಲಾಧಿಕಾರಿ ಆರ್.ಲತಾ ಬಣ್ಣಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ‘ಪ್ರಜಾವಾಣಿ’ ನ್ಯೂಸ್‌ ಕ್ವಿಜ್ ಸ್ಪರ್ಧೆಯ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

‘ಪ್ರಜಾವಾಣಿ ಪತ್ರಿಕೆ ಕಳೆದ ಏಳು ದಶಕಗಳಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ವಿಷಯದಲ್ಲಿ ಮಾಹಿತಿ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಜಾಗೃತಿ, ಕೃಷಿ, ವಾಣಿಜ್ಯ, ಕ್ರೀಡೆ, ಸಾಂಸ್ಕೃತಿಕ, ರಾಜಕೀಯ ಹೀಗೆ ಎಲ್ಲ ಕ್ಷೇತ್ರಗಳ ಪ್ರತಿಯೊಂದು ಸುದ್ದಿಗಳನ್ನು ಓದುಗರಿಗೆ ನೀಡುವ ಜತೆಗೆ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತ ಬಂದಿದೆ’ ಎಂದು ಹೇಳಿದರು.

‘ಇದೀಗ ಪತ್ರಿಕೆ ಓದುಗರ ಸಾಮಾನ್ಯ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನವೆಂಬರ್ 15 ರಿಂದ ನ್ಯೂಸ್ ಕ್ವಿಜ್ ಎಂಬ ಕಾರ್ಯಕ್ರಮವನ್ನು 15 ವಾರಗಳ ಕಾಲ ಹಮ್ಮಿಕೊಂಡಿದೆ. ಪ್ರತಿಯೊಬ್ಬರು ಈ ಸ್ಪರ್ಧೆಯ ಸದುಪಯೋಗ ಪಡೆಯಬೇಕು. ನಾನು ಸಹ ಈ ಕ್ವಿಜ್‌ನಲ್ಲಿ ಭಾಗವಹಿಸುತ್ತೇನೆ’ ಎಂದರು.

‘ಇತ್ತೀಚಿನ ದಿನಗಳಲ್ಲಿ ಮಕ್ಕಳು ಹಾಗೂ ಜನ ಸಾಮಾನ್ಯರು ಮೊಬೈಲ್ ಹಾಗೂ ಕಂಪ್ಯೂಟರ್ ಮುಂದೆ ಹೆಚ್ಚು ಕಾಲವನ್ನು ಕಳೆಯುತ್ತಿದ್ದಾರೆ, ಆದರೆ ದಿನ ಪತ್ರಿಕೆಗಳನ್ನು ಓದುವುದರಿಂದ ಸಮಾಜದಲ್ಲಿನ ಆಗು–ಹೋಗುಗಳನ್ನು ಅರಿತು, ಸಾಮಾನ್ಯ ಜ್ಞಾನವನ್ನು ವೃದ್ಧಿಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ‘ಪ್ರಜಾವಾಣಿ’ ನಿರಂತರವಾಗಿ ಅಗ್ರಪಂಕ್ತಿಯಲ್ಲಿ ನಿಲ್ಲುತ್ತದೆ’ ಎಂದು ಶ್ಲಾಘಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಂಬರೀಶ್‌, ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT