ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ 162ಕ್ಕಿಳಿದ ಸಕ್ರಿಯ ಕೊರೊನಾ ಸೋಂಕಿತರ ಸಂಖ್ಯೆ

Last Updated 12 ಜುಲೈ 2021, 4:26 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಸೋಂಕಿತರ ಸಂಖ್ಯೆ 162ಕ್ಕಿಳಿದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಸೋಂಕಿತರಿಗಿಂತ ಗುಣ ವಾಗುವವರ ಸಂಖ್ಯೆ ಅಧಿಕವಾಗಿದೆ.

ಭಾನುವಾರ ಜಿಲ್ಲೆಯಲ್ಲಿ 10 ಮಂದಿಗೆ ಸೋಂಕು ತಗುಲಿದೆ. 25 ರೋಗಿಗಳು ಗುಣವಾಗಿದ್ದಾರೆ. ಚಿಂತಾಮಣಿ ತಾಲ್ಲೂಕಿನ 60 ವರ್ಷದ ಪುರುಷ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ 4, ‌ಚಿಂತಾಮಣಿ, ಗುಡಿಬಂಡೆ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ತಲಾ ಇಬ್ಬರಿಗೆ ಸೋಂಕು ದೃಢವಾಗಿದೆ. ಇವರಲ್ಲಿ ಐದು ಮಹಿಳೆಯರು ಮತ್ತು ಐದು ಪುರುಷರು ಇದ್ದಾರೆ. ಚಿಕಬಳ್ಳಾಪುರ ತಾಲ್ಲೂಕಿನ 10, ಚಿಂತಾಮಣಿ 5, ಗೌರಿಬಿದನೂರು 3, ಗುಡಿಬಂಡೆ 1 ಮತ್ತು ಶಿಡ್ಲಘಟ್ಟ ತಾಲ್ಲೂಕಿನ ಆರು ರೋಗಿಗಳು ಗುಣವಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಪ್ರಮಾಣ ಶೇ 0.28ರಷ್ಟಿದೆ. ಗುಣವಾಗುವವರ ಪ್ರಮಾಣ ಶೇ 98.71ರಷ್ಟಿದೆ. ಭಾನುವಾರ 3,520 ಜನರ ಗಂಟಲು ಸ್ರಾವ ಮಾದರಿಯನ್ನು ಪರೀಕ್ಷೆಗೆ ಸಂಗ್ರಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT