ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಅಪರಿಚಿತ ವಾಹನ ಡಿಕ್ಕಿ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚೇಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಮೂಗಿರೆಡ್ಡಿಪಲ್ಲಿ ಕೆರೆಯ ಕಟ್ಟೆ ತಿರುವಿನಲ್ಲಿ ನಡೆದಿದೆ.

ತಾಲ್ಲೂಕಿನ ಗೊಟ್ಲಪಲ್ಲಿ ಗ್ರಾಮದ ಭಾನುತೇಜ (16) ಮೃತಪಟ್ಟವರು. ಚೇಳೂರಿನಿಂದ ಗೊಟ್ಲಪಲ್ಲಿ ಗ್ರಾಮಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಮೂಗಿರೆಡ್ಡಿಪಲ್ಲಿ ಕೆರೆ ಕಟ್ಟೆಯ ತಿರುವಿನಲ್ಲಿ ಎದುರುಗಡೆಯಿಂದ ಬಂದ ವಾಹನ ಡಿಕ್ಕಿ ಹೊಡೆದಿದೆ. ದ್ವಿಚಕ್ರವಾಹನ ಸಂಪೂರ್ಣ ಭಸ್ಮವಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ಜಿ.ಪಿ. ರಾಜು, ಸಬ್‌ ಇನ್‌ಸ್ಪೆಕ್ಟರ್ ಪ್ರತಾಪ್ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.