ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಸಂಘಟನೆಗಳ ಮುಷ್ಕರ

Last Updated 30 ಮಾರ್ಚ್ 2022, 2:23 IST
ಅಕ್ಷರ ಗಾತ್ರ

ಗುಡಿಬಂಡೆ: ದೇಶದಲ್ಲಿ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿಲ್ಲ. ರೈತ, ಕಾರ್ಮಿಕ, ಜನ ವಿರೋಧಿ ನೀತಿ ಜಾರಿ ಮಾಡುವ ಮೂಲಕ ಬಂಡವಾಳಗಾರರ ಜೇಬು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕೆ.ಪಿ.ಆರ್.ಎಸ್ ಸಂಘಟನೆಯ ಮುಖಂಡ ಲಕ್ಷ್ಮಿನಾರಾಯಣ ಆರೋಪಿಸಿದರು.

ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ತಾಲ್ಲೂಕು ಕಚೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಅಚ್ಚೇದಿನ ಹೆಸರಿನಲ್ಲಿ ಭಾರತವನ್ನು ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಮಿಕ, ಜನ, ರೈತ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಿದ್ದೇ ದೊಡ್ಡ ಸಾಧನೆಯಾಗಿದೆ ಎಂದು
ಟೀಕಿಸಿದರು.

ಅಂಬಾನಿ, ಅದಾನಿ ಅವರ ಆಸ್ತಿ ದಿನೇ ದಿನೇ ಏರಿಕೆಯಾಗುತ್ತಿದೆ. ಬಡವರು, ಕಾರ್ಮಿಕರ ಆದಾಯ ಕಡಿಮೆಯಾಗುತ್ತಿದೆ. ಚುನಾವಣಾ ಸಮಯದಲ್ಲಿ ಹಿಜಾಬ್ ಘಟನೆಯನ್ನು ಮುಂದಿಡುತ್ತಾರೆ. ಜನಸಾಮಾನ್ಯರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು.

ಸಿಐಟಿಯು ಸಂಘಟನೆಯ ಜಿಲ್ಲಾ ಮುಖಂಡರಾದ ಭಾಗ್ಯಮ್ಮ ಮಾತನಾಡಿ, ಸುಮಾರು ವರ್ಷಗಳಿಂದ ಅಂಗನವಾಡಿ, ಆಶಾ, ಬಿಸಿಯೂಟ ನೌಕರರು ಕಡಿಮೆ ವೇತನಕ್ಕೆ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಉದ್ಯೋಗದ ಭದ್ರತೆಯಾಗಲಿ, ಸಮಾನ ಕೆಲಸಕ್ಕೆ ಸಮಾನ ವೇತನವಾಗಲಿ ನೀಡುತ್ತಿಲ್ಲ. ಅವರಿಗೆ ಸರ್ಕಾರ ಮೋಸ ಮಾಡುತ್ತಿದೆ ಎಂದು ಟೀಕಿಸಿದರು.

ತಹಶೀಲ್ದಾರ್ ಸಿಗ್ಬತ್‌ ಉಲ್ಲಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಿಐಟಿಯು, ಗ್ರಾಮ ಪಂಚಾಯಿತಿ ನೌಕರರ ಸಂಘ, ಬಿಸಿಯೂಟ ನೌಕರರ ಸಂಘ, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT