ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಗೆ ಅಭ್ಯರ್ಥಿಗಳೇ ಇಲ್ಲ!

ಚಿಂತಾಮಣಿ, ಶಿಡ್ಲಘಟ್ಟ ಕ್ಷೇತ್ರದಲ್ಲಿ ನೆಲೆ ಇಲ್ಲ l ಬಾಗೇಪಲ್ಲಿ, ಗೌರಿಬಿದನೂರಿನಲ್ಲಿ ದಂಡ ನಾಯಕರಿಲ್ಲ
Last Updated 27 ಡಿಸೆಂಬರ್ 2022, 8:32 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕನಿಷ್ಠ ಎರಡರಿಂದ ಮೂರು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ’–ಜಿಲ್ಲೆಗೆ ಆಗಾಗ್ಗೆ ಭೇಟಿ ನೀಡುವ ರಾಜ್ಯ ಬಿಜೆಪಿ ಸರ್ಕಾರದ ಸಚಿವರು ಹೇಳುವ ಮಾತಿದು. ಜಿಲ್ಲೆಯವರೇ ಆದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಹ 2023ರ ಚುನಾವಣೆಯಲ್ಲಿ ಬಿಜೆಪಿಗೆ ಜಿಲ್ಲೆಯಲ್ಲಿ ಬಲ ದೊರೆಯಲಿದೆ ಎನ್ನುವ ವಿಶ್ವಾಸದ ಮಾತನಾಡುತ್ತಿದ್ದಾರೆ.

ಆದರೆ ಇಂದಿಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಕಮಲಕ್ಕೆ ದಂಡನಾಯಕರೇ ಇಲ್ಲ ಎನ್ನುವ ಸ್ಥಿತಿ ಇದೆ. ಸಚಿವ ಡಾ.ಕೆ.ಸುಧಾಕರ್ ಅವರೇ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿಯುವರು. ಈ ಕ್ಷೇತ್ರ ಹೊರತು ಪಡಿಸಿ ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಇಂತಹವರೇ ಅಭ್ಯರ್ಥಿಯಾಗುವರು ಎಂದು ಖಚಿತವಾಗಿ ಹೇಳಲು ಕಾರ್ಯಕರ್ತರಿಗೂ
ಸಾಧ್ಯವಾಗುತ್ತಿಲ್ಲ.

ಚಿಕ್ಕಬಳ್ಳಾಪುರ ಹೊರತುಪಡಿಸಿ ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿಯ ಸ್ಥಿತಿ ಒಂದೊಂದು ಬಗೆಯಲ್ಲಿದೆ. ಚಿಂತಾಮಣಿ ಮತ್ತು ಶಿಡ್ಲಘಟ್ಟದಲ್ಲಿ ನಾಯಕತ್ವ ಕೊರತೆ ಎದ್ದು ಕಾಣುತ್ತಿದ್ದರೆ, ಬಾಗೇಪಲ್ಲಿಯಲ್ಲಿ ಮನೆಯೊಂದು ಎರಡು ಬಾಗಿಲು ಎನ್ನುವ ಸ್ಥಿತಿ ಇದೆ. ಗೌರಿಬಿದನೂರಿನಲ್ಲಿ ಟಿಕೆಟ್ ವಿಚಾರವಾಗಿ ದಿನಕ್ಕೊಬ್ಬರ ಹೆಸರು ಮುನ್ನೆಲೆಗೆ ಬರುತ್ತಿದೆ.ರೇಷ್ಮೆನಾಡು ಖ್ಯಾತಿಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಈ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜನತಾ ಪರಿವಾರದ ನಾಯಕರ ಅಖಾಡವಾಗಿದೆ. 1957ರಿಂದ 2018
ರವರೆಗೆ ನಡೆದ 14 ವಿಧಾನಸಭಾ ಚುನಾವಣೆ
ಗಳಲ್ಲಿ 10 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮೂರು ಬಾರಿ ಜನತಾದಳ ಮತ್ತು ಒಮ್ಮೆ ಪಕ್ಷೇತರ ಸದಸ್ಯರು ಗೆಲುವುದಾಖಲಿಸಿದ್ದಾರೆ.

ಇಂತಹ ಕ್ಷೇತ್ರದಲ್ಲಿ ಪ್ರತಿ ಚುನಾವಣೆಗಳಲ್ಲಿಯೂಬಿಜೆಪಿಗೆ ನಾಯಕರ ಕೊರತೆ ಕಾಡುತ್ತದೆ.ಈ ಹಿಂದಿನ ಎರಡೂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ತೀರಾ ಕಡಿಮೆ ಪ್ರಮಾಣದಲ್ಲಿ ಮತಗಳನ್ನು ಪಡೆದಿದೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೆ.ವಿ.ಸದಾಶಿವ 1,917 ಮತಗಳನ್ನು ಪಡೆದಿದ್ದರು. ಅವರ ಮತಗಳಿಕೆಯ ಪ್ರಮಾಣ ಶೇ 1.24ರಷ್ಟಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಚ್.ಸುರೇಶ್ 3,596 ಮತಗಳನ್ನು ಪಡೆದಿದ್ದರು. ಮತಗಳಿಕೆಯ ಪ್ರಮಾಣ ಶೇ 2.17ರಷ್ಟಿತ್ತು.ಶಿಡ್ಲಘಟ್ಟ ಕ್ಷೇತ್ರದಲ್ಲಿ ಬಿಜೆಪಿ ಈ ಹಿಂದಿನ ಚುನಾವಣೆಗಳಲ್ಲಿ ಪಡೆದ ಮತಗಳನ್ನು ಗಮನಿಸಿದರೆ ಈ ಕ್ಷೇತ್ರದಲ್ಲಿ ಗ್ರಾಮೀಣ ಮಟ್ಟದಲ್ಲಿ ಇಂದಿಗೂ ಕಮಲ ಪಾಳಯಕ್ಕೆ ನಾಯಕರು ಮತ್ತು ಕಾರ್ಯಕರ್ತರ ಕೊರತೆ
ಕಾಡುತ್ತಿದೆ.ಚಿಂತಾಮಣಿ ಕ್ಷೇತ್ರದಲ್ಲಿ ಬಿಜೆಪಿ ಈ ಹಿಂದಿನ ಚುನಾವಣೆಗಳಲ್ಲಿ ಪಡೆದ ಮತಗಳನ್ನು ಗಮನಿಸಿದರೆ ಈ ಕ್ಷೇತ್ರದಲ್ಲಿ ಗ್ರಾಮೀಣ ಮಟ್ಟದಲ್ಲಿ ಇಂದಿಗೂ ಕಮಲ ಪಾಳಯಕ್ಕೆ ನಾಯಕರು ಮತ್ತು ಕಾರ್ಯಕರ್ತರು ಇಲ್ಲ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದನಾ. ಶಂಕರ್ ಕೇವಲ 1,961 ಮತಗಳನ್ನು ಗಳಿಸಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಸತ್ಯನಾರಾಯಣ ಮಹೇಶ್ 1,911 ಮತಗಳನ್ನು ಪಡೆದಿದ್ದರು.

ಶಿಡ್ಲಘಟ್ಟ ಮತ್ತು ಚಿಂತಾಮಣಿ ಕ್ಷೇತ್ರದಲ್ಲಿ ಈ ಹಿಂದಿನಿಂದಲೂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗಳಿಕೆ ಉತ್ತಮವಾಗಿಲ್ಲ. ಈಗ ಸಮರ್ಥ ನಾಯಕತ್ವದ ಕೊರತೆಯೂ ಕಾಡುತ್ತಿದೆ.

ಗೌರಿಬಿದನೂರಿನಲ್ಲಿಯೂ ತಿಕ್ಕಾಟ:ಗೌರಿಬಿದನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಾಳಯದಲ್ಲಿ ಮೂಲ ಮತ್ತು ವಲಸಿಗ ಎನ್ನುವ ಬಣ ರಾಜಕಾರಣ ವಿದೆ. ಇದು ಪಕ್ಷದ ಆಂತರಿಕ ವಲಯದಲ್ಲಿ ಆಗಾಗ್ಗೆ ತಿಕ್ಕಾಟಕ್ಕೆ ಕಾರಣವಾಗುತ್ತಿದೆ.2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎನ್.ಎಂ.ರವಿನಾರಾಯಣ ರೆಡ್ಡಿ 31,840 ಮತ್ತು 2018ರ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದ ಕೆ.ಜೈಪಾಲ್ ರೆಡ್ಡಿ 34,759 ಮತಗಳನ್ನು
ಪಡೆದಿದ್ದಾರೆ. ಈ ಎರಡೂ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಹೆಚ್ಚು ಮತಗಳನ್ನು ಪಡೆದ ಕ್ಷೇತ್ರ ಗೌರಿಬಿದನೂರು. ಲ್ಲೆಯಲ್ಲಿ ಬಿಜೆಪಿ ಗೆಲ್ಲ
ಬೇಕು ಎಂದುಕೊಂಡಿರುವ ಕ್ಷೇತ್ರಗಳಲ್ಲಿ ಗೌರಿಬಿದನೂರು ಸಹ ಒಂದು. ಆದರೆ ಈ ಕ್ಷೇತ್ರದಲ್ಲಿಯೂ ಬಿಜೆಪಿಗೆ ಸಮರ್ಥ
ನಾವಿಕನಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT