ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರಿಬಿದನೂರು: ಬೈಕ್‌ ಅಡ್ಡಗಟ್ಟಿ ಉಂಗುರ ಕಸಿದ ಕಳ್ಳರು

Published 4 ಜನವರಿ 2024, 14:26 IST
Last Updated 4 ಜನವರಿ 2024, 14:26 IST
ಅಕ್ಷರ ಗಾತ್ರ

ಗೌರಿಬಿದನೂರು: ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಹಾಡುಹಗಲೇ ಕಳ್ಳರು ಅಡ್ಡಗಟ್ಟಿ, ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಆತನ ಕೈಯಲ್ಲಿದ್ದ ಉಂಗುರ ಕಸಿದು ಪರಾರಿಯಾಗಿರುವ ಘಟನೆ ತಾಲ್ಲೂಕಿನ ವಡ್ಡನಹಳ್ಳಿ ಗೇಟ್ ಬಳಿ ನಡೆದಿದೆ.

ಗುರುವಾರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲ್ಲೂಕಿನ ಬನವತಿ ಗ್ರಾಮದ ಮಾರಣ್ಣ ಮತ್ತು ಲಕ್ಷ್ಮೀದೇವಮ್ಮ ದಂಪತಿ ಗೌರಿಬಿದನೂರಿನ ಆಸ್ಪತ್ರೆಗೆ ತೆರಳಲು, ಆರೂಡಿಯ ಬ್ಯಾಂಕ್‌ನಲ್ಲಿ ಹಣ ಡ್ರಾ ಮಾಡಿಕೊಂಡು ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು.

ಇವರನ್ನು ಹಿಂಬಾಲಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು, ಬೈಕ್‌ ಅಡ್ಡಗಟ್ಟಿ ಹಣ ಕಸಿಯಲು ಪ್ರಯತ್ನಿಸಿದ್ದಾರೆ. ಆ ವೇಳೆ ಮಾರಣ್ಣ ಪ್ರತಿರೋಧ ತೋರಿದಾಗ ಆತನ ಮೇಲೆ ಹಲ್ಲೆ ನಡೆಸಿ, ಅವರು ಧರಿಸಿದ್ದ ಎರಡು ಉಂಗುರ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ‌ ಮಂಚೇನಹಳ್ಳಿ ಮತ್ತು ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದರು. ಮಂಚೇನಹಳ್ಳಿ ಪೊಲೀಸ್‌ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT