ಭಾನುವಾರ, ಆಗಸ್ಟ್ 1, 2021
26 °C
ಕೋವಿಡ್-– 19 ಬಗ್ಗೆ ಆತಂಕ ಬೇಡ, ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಜಿಲ್ಲೆಯಲ್ಲಿ 32 ಕೊರೊನಾ ಪ್ರಕರಣ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗೌರಿಬಿದನೂರು, ಚಿಂತಾಮಣಿ, ಚಿಕ್ಕಬಳ್ಳಾಪುರ, ಗುಡಿಬಂಡೆ ತಾಲ್ಲೂಕುಗಳಲ್ಲಿ ಬುಧವಾರ ಒಟ್ಟು 32 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.

ಇಷ್ಟು ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ದಾಖಲಾಗಿರುವುದಕ್ಕೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ
ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 89 ಕೋವಿಡ್– 19 ಪ್ರಕರಣ ಕ್ರಿಯಾಶೀಲವಾಗಿದೆ. ಅದರಲ್ಲಿ ಬುಧವಾರ ಒಂದೇ ದಿನದಲ್ಲಿ 32 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಗೌರಿಬಿದನೂರಿನಲ್ಲಿ 14, ಚಿಂತಾಮಣಿಯಲ್ಲಿ 13, ಚಿಕ್ಕಬಳ್ಳಾಪುರದಲ್ಲಿ 4, ಗುಡಿಬಂಡೆಯಲ್ಲಿ 1 ಕೊರೊನಾ ಪ್ರಕರಣ ದಾಖಲಾಗಿವೆ.

ಇದರಲ್ಲಿ ಗೌರಿಬಿದನೂರಿನಲ್ಲಿ ಇಬ್ಬರು ಕೊರೊನಾ ಸೋಂಕಿತ ವ್ಯಕ್ತಿಗಳಿಂದ 14 ಜನ ಪ್ರಾಥಮಿಕ ಹಂತದ ಸೋಂಕು ತಗುಲಿದೆ. ಚಿಂತಾಮಣಿಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟ ಮಹಿಳೆಯ ಪ್ರಾಥಮಿಕ ಹಂತದ 9 ಜನರಿಗೆ ಹಾಗೂ ಬೆಂಗಳೂರಿನಿಂದ ಚಿಂತಾಮಣಿಗೆ ಪ್ರಯಾಣ ಮಾಡಿದ 5 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.

ಕೋವಿಡ್-19 ತಡೆಗಟ್ಟಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಅಂತರ ಕಾಯ್ದುಕೊಳ್ಳುವುದರ ಮೂಲಕ ಕೊರೊನಾ  ತಡೆಗಟ್ಟಬಹುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.