ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರದಲ್ಲಿ ಕಾಲುವೆಗೆ ಉರುಳಿದ ಕಾರು; ಮೂವರು ಬೆಸ್ಕಾಂ ಸಿಬ್ಬಂದಿ ಸಾವು

Published 7 ಜೂನ್ 2024, 4:13 IST
Last Updated 7 ಜೂನ್ 2024, 4:13 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.

ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು.

ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಈ ನಾಲ್ಕು ಮಂದಿ ನಗರಗೆರೆಯಿಂದ ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರಕ್ಕೆ ಬರುತ್ತಿದ್ದರು. ಗ್ರಾಮದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT