ಮಂಗಳವಾರ, ಜೂನ್ 28, 2022
25 °C

ಚಿಕ್ಕಬಳ್ಳಾಪುರ: ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ತಾಲ್ಲೂಕಿನ ಜಾತವಾರ ಹೊಸಹಳ್ಳಿ ಬಳಿ ಶುಕ್ರವಾರ ರಾತ್ರಿ ಕಾರು ಸೇತುವೆಗೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿಯ ಲಕ್ಷ್ಮಿ, ಬೆಂಗಳೂರಿನ ಕೆ.ಆರ್.ಪುರಂನ ಅರುಣ್, ಶಿವಕುಮಾರ್ ಮೃತರು. ಚಂದ್ರಶೇಖರ್ ಎಂಬುವವರು ಗಾಯಗೊಂಡಿದ್ದಾರೆ. 

ಕಾರಿನಲ್ಲಿ ಚಿಕ್ಕಬಳ್ಳಾಪುರದಿಂದ ಚಿಂತಾಮಣಿಯತ್ತ ಇವರು ತೆರಳುತಿದ್ದರು. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು