ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ಕುಟುಂಬದ ಮೂವರಿಗೆ ಕೊರೊನಾ

Last Updated 10 ಜುಲೈ 2020, 8:22 IST
ಅಕ್ಷರ ಗಾತ್ರ

ಬಾಗೇಪಲ್ಲಿ: ಪಟ್ಟಣದ ಪೊಲೀಸ್ ವಸತಿ ಗೃಹದ ಕಾನ್‌ಸ್ಟೆಬಲ್‌ ಸೇರಿದಂತೆ ತಾಲ್ಲೂಕಿನ ಯಂಡ್ರಕಾಯಲಪಲ್ಲಿ ಗ್ರಾಮದ ಒಂದೇ ಕುಟುಂಬದ ಮೂವರಿಗೆ ಗುರುವಾರ ಕೋವಿಡ್–19 ಸೋಂಕು ದೃಢಪಟ್ಟಿದೆ.

ಚಿಕ್ಕಬಳ್ಳಾಪುರದಲ್ಲಿ ಸಂಚಾರಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೆಬಲ್‌ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪ್ರತಿನಿತ್ಯ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರಕ್ಕೆ ಪ್ರಯಾಣ ಮಾಡುತ್ತಿದ್ದರು. ಜ್ವರ ಕಾಣಿಸಿಕೊಂಡಿದ್ದರಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್– 19 ಪರೀಕ್ಷೆ ಮಾಡಿಸಿದ್ದರು. ಗುರುವಾರ ಸೋಂಕು ದೃಢಪಟ್ಟಿದೆ.

ಕಾನ್‌ಸ್ಟೆಬಲ್‌ನ್ನು ಚಿಕ್ಕಬಳ್ಳಾಪುರ ಕೊರೊನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರಿಗೆ ಹೋಂ ಕ್ವಾರೆಂಟೈನ್ ಮಾಡಲಾಗಿದೆ.

ಒಂದೇ ಕುಟುಂಬದ ಮೂವರಿಗೆ ಕೊರೊನಾ:ತಾಲ್ಲೂಕಿನ ಯಂಡ್ರಕಾಯಲಪಲ್ಲಿ ಗ್ರಾಮದ ಒಂದೇ ಕುಟುಂಬದ ಅಣ್ಣ ಹಾಗೂ ತಮ್ಮನಿಗೆ ಹಾಗೂ ಕುಟುಂಬದ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಅಣ್ಣ-ತಮ್ಮ ಬೆಂಗಳೂರಿಗೆ ಹೋಗಿ ಬಂದಿದ್ದರು‌. ಜ್ವರ ಬಂದಿದ್ದರಿಂದ ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲುಸ್ರಾವ ಪರೀಕ್ಷೆ ಮಾಡಿಸಿದ್ದರು. ಗುರುವಾರ ಸೋಂಕು ದೃಢಪಟ್ಟಿದೆ.

ಪಟ್ಟಣದ ಪೊಲೀಸ್ ವಸತಿಗೃಹ, ಕಾನ್‌ಸ್ಟೆಬಲ್‌ ಮನೆ ಹಾಗೂ ಯಂಡ್ರಕಾಯಲಪಲ್ಲಿ ಗ್ರಾಮದ ಸೋಂಕಿತರ ಕುಟುಂಬದ ಮನೆ ಸುತ್ತಲೂ ಸೀಲ್‌ಡೌನ್ ಮಾಡಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಸಿ.ಎನ್.ಸತ್ಯನಾರಾಯಣರೆಡ್ಡಿ ಹಾಗೂ ಸರ್ಕಲ್ ಇನ್‌ಸ್ಪೆಕ್ಟರ್ ನಯಾಜ್ ಬೇಗ್ ಎರಡು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇವರ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ, ಗಂಟಲುಸ್ರಾವಪರೀಕ್ಷೆ ಮಾಡಿಸುವಂತೆ ಕುಟುಂಬದವರಿಗೆ ಹಾಗೂ ಸಂಪರ್ಕಿತರಿಗೆ ತಿಳಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಸತ್ಯನಾರಾಯಣ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT