ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಶ್ರೀನಿವಾಸಸಾಗರ ಜಲಾಶಯದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳ ಸಾವು

Last Updated 1 ಏಪ್ರಿಲ್ 2023, 12:41 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ತಾಲ್ಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ಮುಳುಗಿ ಶನಿವಾರ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಬೆಂಗಳೂರಿನ ಲಿಂಗರಾಜಪುರದ ಪೂಜಾ (21), ನಾಗವಾರ ಬಳಿಯ ಅಮರಜ್ಯೋತಿ ನಗರದ ಇಮ್ರಾನ್ ಖಾನ್ (21), ಯಲಹಂಕದ ರಾಧಿಕಾ (21) ಮೃತರು. ಈ ಮೂವರು ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡಿ.ಫಾರ್ಮ್ ಓದುತ್ತಿದ್ದರು.

ಆರು ಮಂದಿ ಸ್ನೇಹಿತರ ಜತೆ ಇವರು ಶ್ರೀನಿವಾಸಸಾಗರಕ್ಕೆ ಪ್ರವಾಸಕ್ಕೆ ಬಂದಿದ್ದರು. ಜಲಾಶಯದ ಹಿನ್ನೀರಿಗೆ ಇಳಿದಾಗ ಮೂವರು ಮುಳುಗಿದ್ದಾರೆ. ಚನ್ನರಾಮ, ಸುನೀತಾ ಮತ್ತು ವಿಕಾಸ್ ಅಪಾಯದಿದಂದ ಪಾರಾಗಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಜಲಾಶಯದಲ್ಲಿ ಶೋಧ ಕಾರ್ಯ ನಡೆಸಿದ್ದ ಪೂಜಾ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT