ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗೆ ನೀರು ತುಂಬಿಸಲು ಆಗ್ರಹ

ರೈತರ ಬೇಡಿಕೆ ಈಡೇರಿಕೆಗೆ ರೈತ ಸಂಘಟನೆಗಳ ಪ್ರತಿಭಟನೆ
Last Updated 3 ಆಗಸ್ಟ್ 2021, 4:09 IST
ಅಕ್ಷರ ಗಾತ್ರ

ಚಿಂತಾಮಣಿ: ರೈತರ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ತೆರಳಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ರಘುನಾಥರೆಡ್ಡಿ ಮಾತನಾಡಿ, ತಾಲ್ಲೂಕಿನಲ್ಲಿ ಹಲವಾರು ವರ್ಷಗಳಿಂದ ಸತತ ಬರಗಾಲವಿದ್ದು ಅಂತರ್ಜಲ ಮಟ್ಟ ಕುಸಿದಿದೆ. ರೈತರು ಹಾಗೂ ಸಾರ್ವಜನಿಕರು ಮತ್ತು ಜಾನುವಾರುಗಳ ಬಳಕೆಗೆ ನೀರಿನ ಕೊರತೆ ಎದುರಾಗಿದೆ. ತಾಲ್ಲೂಕಿನಲ್ಲಿ ಯಾವುದೇ ನದಿ, ನಾಲೆಗಳಿಲ್ಲ. ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಯಡಿ ತಾಲ್ಲೂಕಿನ ಎಲ್ಲ ಕೆರೆಗಳನ್ನು ತುಂಬಿಸಬೇಕು. ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಶೀಘ್ರವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು, ಕೆರೆಗಳಲ್ಲಿರುವ ಗಿಡಗಳನ್ನು ಸ್ವಚ್ಛಗೊಳಿಸುವುದು ಮತ್ತು ರಾಜಕಾಲುವೆಗಳನ್ನು ಪುನಶ್ಚೇತನಗೊಳಿಸುವ ಕಾಮಗಾರಿ
ಗಳನ್ನು ಕೈಗೊಳ್ಳಬೇಕು. ರೈತರ ಪಿ.ನಂಬರ್ ಜಮೀನುಗಳನ್ನು ದುರಸ್ತಿ ಮಾಡಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಲ್ಲ ರೈತರಿಗೆ ಕೃಷಿ ಸಾಲವನ್ನು ಮಂಜೂರು ಮಾಡಬೇಕು. ಉಳಿಕೆ ಇರುವ ಎಲ್ಲ ರೈತರಿಗೂ ಬಡ್ಡಿ ಮತ್ತು ಅಸಲನ್ನು ಮನ್ನಾ ಮಾಡಲು ಮನವಿ ಮಾಡಿದರು.

ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ₹6 ಸಾವಿರ ಕೇಂದ್ರ ಸರ್ಕಾರ ಮತ್ತು ₹4 ಸಾವಿರ ರಾಜ್ಯ ಸರ್ಕಾರ ನೀಡಿರುವ ಹಣವನ್ನು ಕೆಲವು ಬ್ಯಾಂಕುಗಳಲ್ಲಿ ಸಾಲಕ್ಕೆ ವಜಾ ಮಾಡಿಕೊಂಡಿರುವುದು ಖಂಡನೀಯ. ಮುಂಗಾರಿನ ಕೃಷಿಗಾಗಿ ಹಣವಿಲ್ಲದೆ ರೈತರಿಗೆ ತೊಂದರೆಯಾಗಿದೆ. ಕಿಸಾನ್ ಸಮ್ಮಾನ್ ಹಣವನ್ನು ಸಾಲಕ್ಕೆ ಜಮಾ ಮಾಡಿಕೊಳ್ಳಬಾರದು ಎಂದು ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಲು ಒತ್ತಾಯಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವೆಂಕಟರಾಮಯ್ಯ ಮಾತನಾಡಿ, ಉದ್ಯೋಗ ಖಾತ್ರಿ ಮತ್ತು ವೃದ್ಧಾಪ್ಯ ವೇತನ ಹಣವನ್ನು ಬ್ಯಾಂಕ್ ಸಾಲಗಳಿಗೆ ಮನ್ನಾ ಮಾಡಿಕೊಳ್ಳುತ್ತಿದ್ದು, ಬಡ ರೈತರು ಜೀವನ ನಡೆಸಲು ತೊಂದರೆ
ಯಾಗುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ 3 ವರ್ಷ ಪೂರೈಸಿರುವ ಕಂಪ್ಯೂಟರ್ ಆಪರೇಟರ್‌ಗಳನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಮುಖಂಡರಾದ ಎಸ್. ವೆಂಕಟಸುಬ್ಬಾರೆಡ್ಡಿ, ತಿಮ್ಮರಾಯಪ್ಪ, ಬಿ.ವಿ.ಶ್ರೀರಾಮರೆಡ್ಡಿ, ಸತ್ಯನಾರಾಯಣ, ಮುನಿವೆಂಕಟಪ್ಪ, ಜಯರಾಮರೆಡ್ಡಿ, ಎಂ.ಯಲ್ಲಪ್ಪ, ವೆಂಕಟೇಶಪ್ಪ, ನರಸಿಂಹಮೂರ್ತಿ, ವೆಂಕಟೇಶ್, ಅಶ್ವತ್ಥಗೌಡ, ಕೆ.ವಿ.ರಾಮನ್ನ, ಸಿ.ಎಂ.ಕೃಷ್ಣ, ಶ್ರೀನಿವಾಸ
ಪ್ರಸಾದ್, ಬಚ್ಚಣ್ಣ, ಮಿಲ್ ನಾರಾಯಣಸ್ವಾಮಿ, ಅಂಕಾಲಮಡಗು ಶ್ರೀರಾಮರೆಡ್ಡಿ, ವೆಂಕಟರೆಡ್ಡಿ, ಮುನಿಯಪ್ಪ, ರಾಮಚಂದ್ರಪ್ಪ, ಆನಂದ್, ಮುನಿಯಪ್ಪ, ಆಂಜನೇಯ
ರೆಡ್ಡಿ, ನರಸಪ್ಪ, ವನಜಾಕ್ಷಮ್ಮ, ನಾಗರಾಜ್, ರೆಡ್ಡೆಪ್ಪ.ಕೆ.ವಿ, ಸುರೇಶ್, ಚೋಟೂ ಸಾಬ್, .ನಾರಾಯಣಸ್ವಾಮಿ, ನವೀನ್ ಗೌಡ, ಮಂಜುನಾಥ್, ನಾಗೇಶ್, ಚಂದ್ರಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT