ಗೌರಿಬಿದನೂರು: ನರೇಗಾ ಯೋಜನೆಗೆ ಹೆಚ್ಚುವರಿಯಾಗಿ ₹ 1 ಲಕ್ಷ ಅನುದಾನ ನೀಡಬೇಕು ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ಸದಸ್ಯರು ಒತ್ತಾಯಿಸಿದರು.

ಸಿಐಟಿ ಜಿಲ್ಲಾ ಕಾರ್ಯದರ್ಶಿ ಸಿದ್ದಗಂಗಪ್ಪ ಮಾತನಾಡಿ, ಕೂಲಿ ಕಾರ್ಮಿಕ ಕುಟುಂಬಗಳಿಗೆ ತಿಂಗಳಿಗೆ ₹ 7,500ರನ್ನು ಕನಿಷ್ಠ 3 ತಿಂಗಳು ನೀಡಬೇಕು. ವಲಸೆ ಕಾರ್ಮಿಕ ಕುಟುಂಬಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಅಪಘಾತದಲ್ಲಿ ಮೃತಪಟ್ಟವರಿಗೆ ಮತ್ತು ಆತ್ಮಹತ್ಯೆ ಮಾಡಿಕೊಂಡವರಿಗೆ ಗರಿಷ್ಠ ಪರಿಹಾರ ನೀಡಬೇಕು ಎಂದರು.

ಸರ್ಕಾರಿ ಭೂಮಿಯನ್ನು ಭೂಮಿ ರಹಿತ ಕೃಷಿ ಕೂಲಿಕಾರರಿಗೆ ಹಾಗೂ ದಲಿತರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್.ಆರ್. ರವಿಚಂದ್ರರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಘೋಷಿಸಿರುವ ₹ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ನಿಂದ ಸಾಮಾನ್ಯ ಜನರಿಗೆ ಉಪಯೋಗವಿಲ್ಲ. ಕೇಂದ್ರದ ನೀತಿಗಳಿಂದಾಗಿ ಕಾರ್ಮಿಕರು, ರೈತರು ಮತ್ತು ಬಡವರಿಗೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರ್ಪೋರೇಟ್ ಕಂಪನಿಗಳಿಗೆ ಮಣೆ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರತ್ನಮ್ಮ, ವೆಂಕಟಸ್ವಾಮಿ, ನಾಗಪ್ಪ, ಅಶ್ವತ್ಥ, ಆನೂಡಿ ನಾಗರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.