ಗೌರಿಬಿದನೂರು: ನಗರದ ಡಾ.ಎಚ್.ಎನ್ ಕಲಾಮಂದಿರದಲ್ಲಿ ಇದೇ 27ರಂದು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಒಂಬತ್ತನೇ ತಾಲ್ಲೂಕು ಕನ್ನಡ ಸಾಹಿತ್ಯ
ಸಮ್ಮೇಳನ ಆಯೋಜಿಸಲಾಗಿದೆ.

ಲೇಖಕ ಹಾಗೂ ನಿವೃತ್ತ ಪ್ರಾಂಶುಪಾಲ ನಗರಗೆರೆಯ ಪ್ರೊ.ಎನ್. ರಮೇಶ್ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಬೆಳಿಗ್ಗೆ ಡಾ.ಎನ್.ಎನ್ ಕಲಾಮಂದಿರದ ಮುಂಭಾಗ ತಹಶೀಲ್ದಾರ್ ಎಚ್. ಶ್ರೀನಿವಾಸ್, ನಗರಸಭೆ ಆಯುಕ್ತೆ ಡಿ.ಎಂ. ಗೀತಾ, ತಾಲ್ಲೂಕು ಕಸಾಪ ಅಧ್ಯಕ್ಷ ಟಿ.ನಂಜುಂಡಪ್ಪ ಅವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಲಿದೆ.

ಬಳಿಕ ಕನ್ನಡ ಮಾತೆ ಭುವನೇಶ್ವರಿ ಭಾವಚಿತ್ರದೊಂದಿಗೆ ರಥದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರನ್ನು ನಗರದ ವಾಲ್ಮೀಕಿ ವೃತ್ತದಿಂದ ಪೂರ್ಣಕುಂಭ ಕಳಸಗಳೊಂದಿಗೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ. ಸಿಪಿಐ ಕೆ.ಪಿ. ಸತ್ಯನಾರಾಯಣ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಜಿ. ವೇಣುಗೋಪಾಲರೆಡ್ಡಿ, ಕಸಾಪ ಜಿಲ್ಲಾಧ್ಯಕ್ಷ ಪ್ರೊ. ಕೋಡಿರಂಗಪ್ಪ, ತಾಲ್ಲೂಕು ಅಧ್ಯಕ್ಷ ಟಿ. ನಂಜುಂಡಪ್ಪ, ನಗರಸಭೆ ಅಧ್ಯಕ್ಷೆ ಎಸ್. ರೂಪ ಅನಂತರಾಜು ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.

ವೇದಿಕೆಯಲ್ಲಿ ವಿಚಾರ ಗೋಷ್ಠಿ, ಕವಿಗೋಷ್ಠಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವರಿಗೆ ಸನ್ಮಾನ ಸೇರಿದಂತೆ ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ಸಮ್ಮೇಳನಾಧ್ಯಕ್ಷರ ಪರಿಚಯ:ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಗರಗೆರೆ ಪ್ರೊ. ಎನ್. ರಮೇಶ್ ಅವರು 1948ರಲ್ಲಿ ಜನಿಸಿದ್ದು, ತಾಯಿ ಶಾರದಮ್ಮ, ತಂದೆ ನಾರಾಯಣರಾವ್. ಇವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ತಾಲ್ಲೂಕಿನಲ್ಲಿಯೇ ಪೂರೈಸಿ, 1970ರಲ್ಲಿ ತಿರುಪತಿಯ
ವೆಂಕಟೇಶ್ವರ ವಿದ್ಯಾಲಯದಲ್ಲಿ ಆಂಗ್ಲ ಭಾಷೆಯಲ್ಲಿ ಎಂ.ಎ ಸ್ನಾತಕೋತ್ತರ ಪದವಿ
ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.