ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಕೋವಿಡ್ ಲಸಿಕಾ ಮೇಳ: ಜಿಲ್ಲಾಧಿಕಾರಿ ಆರ್. ಲತಾ

Last Updated 27 ಆಗಸ್ಟ್ 2021, 3:11 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಆ. 27ರಂದು ಕೋವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ವಿವಿಧ ಗುಂಪಿನವರಿಗೆ ಆದ್ಯತೆ ನೀಡುವ ಮೂಲಕ ಮೇಳವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಲತಾ ಮನವಿ ಮಾಡಿದ್ದಾರೆ.

ಇದುವರೆಗೆ ಒಂದು ಡೋಸ್ ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಶೇ 100ರಷ್ಟು, ಎರಡನೇ ಡೋಸ್‌ಗೆ ಬಾಕಿ ಇರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಶೇ 100ರಷ್ಟು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 1ರಿಂದ 10ನೇ ತರಗತಿ, ಪದವಿಪೂರ್ವ ಕಾಲೇಜಿನ ಬೋಧಕ, ಬೋಧಕೇತರ ‌ಸಿಬ್ಬಂದಿ ಕೋವಿಡ್ ಲಸಿಕೆ ಪಡೆಯದೆ ಇದ್ದಲ್ಲಿ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದಿದ್ದಾರೆ.

ಮೇಳ ನಡೆಯುವ ಸ್ಥಳಗಳು: ಜಿಲ್ಲಾ ಆಸ್ಪತ್ರೆ, ಎಲ್ಲ ತಾಲ್ಲೂಕು ಆಸ್ಪತ್ರೆಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 157 ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 227 ಕೇಂದ್ರಗಳಲ್ಲಿ ಲಸಿಕೆ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT