ಗೌರಿಬಿದನೂರು: ನಗರದ ಡಾ.ಎಚ್.ಎನ್. ಕಲಾಭವನದಲ್ಲಿ ಅ. 9ರಂದು ಸಂಜೆ 6ಕ್ಕೆ ತಾಲ್ಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ರಂಗ ವಿಜಯ ತಂಡದ ಆಶ್ರಯದಲ್ಲಿ ‘ಸ್ವಾತಂತ್ರ್ಯ ಸಮರ ಕರುನಾಡು ಅಮರ‘ ಎಂಬ ಐತಿಹಾಸಿಕ ನಾಟಕ ಪ್ರದರ್ಶನ ಜರುಗಲಿದೆ.
ಇದೇ ವೇಳೆ ಲಕ್ಷ್ಮಿನಾರಾಯಣ್ ಮತ್ತು ಸಂಗಡಿಗರಿಂದ ದೇಶ ಭಕ್ತಗೀತೆಗಳು ಹಾಗೂ ಪಿ.ಎಸ್. ಗೀತಾ ಮತ್ತು ಸಂಗಡಿಗರಿಂದ ಸಮೂಹ ನೃತ್ಯಗಳನ್ನು ಆಯೋಜಿಸಲಾಗಿದೆ ಎಂದು ಇಲ್ಲಿನ ಮಿನಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ರಂಗ ವಿಜಯ ಟ್ರಸ್ಟ್ ಕಾರ್ಯದರ್ಶಿ ಪಿ.ಎಸ್. ಗೀತಾ ತಿಳಿಸಿದರು.
ಇದೇ ನಾಟಕವನ್ನು ಅ. 10ರಂದು ಮಧ್ಯಾಹ್ನ 12ಕ್ಕೆ ವಿದುರಾಶ್ವತ್ಥದ ಎನ್.ಸಿ. ನಾಗಯ್ಯರೆಡ್ಡಿ ಕಲಾಭವನದಲ್ಲಿ ಪ್ರಸ್ತುತ ಪಡಿಸಲಿದ್ದಾರೆ. ಈ ವೇಳೆ ರಕ್ಷಿತಾ ಮತ್ತು ಸಂಗಡಿಗರಿಂದ ದೇಶಭಕ್ತಿಗೀತೆಗಳ ಗಾಯನ ಹಾಗೂ ಲಲಿತಾ ಮತ್ತು ಸಂಗಡಿಗರಿಂದ ಸಮೂಹ ನೃತ್ಯಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಪ್ರತಿ ತಾಲ್ಲೂಕುವಾರು ಸ್ವಾತಂತ್ರ್ಯ ಸಮರ ಕರುನಾಡು ಅಮರ ಐತಿಹಾಸಿಕ ನಾಟಕವನ್ನು ಪ್ರದರ್ಶನ ಮಾಡಲಾಗುತ್ತಿದೆ. ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು. ತಹಶೀಲ್ದಾರ್ ಎಚ್. ಶ್ರೀನಿವಾಸ್ ಅಧ್ಯಕ್ಷತೆವಹಿಸುವರು ಎಂದರು.
ತಹಶೀಲ್ದಾರ್ ಎಚ್. ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನಲ್ಲಿ ರಂಗ ವಿಜಯಾ ತಂಡದಿಂದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಂಬಂಧಿಸಿದ ನಾಟಕ ಪ್ರದರ್ಶನ ಮಾಡಲಾಗುತ್ತಿದೆ. ಕಲೆ ಮತ್ತು ಸಂಸ್ಕೃತಿಯ ಜತೆಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ನಗರಸಭೆ ಪೌರಾಯುಕ್ತ ಸತ್ಯನಾರಾಯಣ, ಮಧುಸೂದನ ರೆಡ್ಡಿ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.