ಶುಕ್ರವಾರ, ಆಗಸ್ಟ್ 12, 2022
20 °C

ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ತಾಲ್ಲೂಕಿನ ಮುರುಗಮಲ್ಲ-ಯಗವಕೋಟೆ ರಸ್ತೆಯ ಗುಂಡ್ಲಹಳ್ಳಿ ಕ್ರಾಸ್ ಬಳಿ ಬುಧವಾರ ರಾತ್ರಿ ದ್ವಿಚಕ್ರವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ವ್ಯಕ್ತಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಗುಂತೂರುಗಡ್ಡ ಗ್ರಾಮದ ಶ್ರೀಕಾಂತ್(24) ಮೃತಪಟ್ಟವರು. ಫಸಲನಾಯಕನಹಳ್ಳಿಯ ಲಕ್ಷ್ಮಣ್ ಗಾಯಗೊಂಡಿದ್ದಾರೆ.

ಈ ಇಬ್ಬರು ಸ್ವಂತ ಕೆಲಸ ನಿಮಿತ್ತ ಮುರುಗಮಲ್ಲ ಗ್ರಾಮಕ್ಕೆ ಹೋಗುತ್ತಿದ್ದಾಗ ಗುಂಡ್ಲಹಳ್ಳಿ ಕ್ರಾಸ್ ಸಮೀಪ ಕೊಳವೆಬಾವಿ ಮೋಟಾರ್‌ ಮೇಲೆತ್ತುವ ಯಂತ್ರವನ್ನು ಹೊತ್ತು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ ಎಂದು ಶ್ರೀಕಾಂತ್ ಸಂಬಂಧಿ ಜಿ.ಎನ್. ಜನಾರ್ದನ್  ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಸ್ಥಳದಲ್ಲಿಯೇ ಟ್ರ್ಯಾಕ್ಟರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಬಟ್ಲಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು