ಮಂಗಳವಾರ, ಆಗಸ್ಟ್ 16, 2022
29 °C

ಸಾರಿಗೆ ನೌಕರರ ಅರೆಬೆತ್ತಲೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗೇಪಲ್ಲಿ: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಭಾನುವಾರ ಬಸ್‌ನಿಲ್ದಾಣದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

ಮಹಾತ್ಮ ಗಾಂಧೀಜಿಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ನಂತರ ಅರೆಬೆತ್ತಲೆಯಾಗಿ ಕುಳಿತು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರು.

ತಾಲ್ಲೂಕಿನಲ್ಲಿ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ  ಮುಷ್ಕರ ನಡೆಸಿದರು.

ಇದರಿಂದ ವಿವಿಧೆಡೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಬಂದ್ ಆಗಿದ್ದರಿಂದ ದೂರದ ಸ್ಥಳಗಳಿಗೆ ತೆರಳಬೇಕಿರುವ ಪ್ರಯಾಣಿಕರಿಗೆ ತೊಂದರೆಯಾಯಿತು. ಆಂಧ್ರಪ್ರದೇಶದ ಕಡೆಗೆ ಹೋಗುವ ಪ್ರಯಾಣಿಕರು ಬಸ್‌ಗಳು ಇಲ್ಲದೆ ಪರದಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.