ಗುರುವಾರ , ಅಕ್ಟೋಬರ್ 29, 2020
21 °C

ಗೌರಿಬಿದನೂರಿನಲ್ಲಿ ಎರಡು ಅಪರಿಚಿತ ಶವಗಳು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

deadbody

ಚಿಕ್ಕಬಳ್ಳಾಪುರ: ಗೌರಿಬಿದನೂರಿನ ನ್ಯಾಷನಲ್ ಕಾಲೇಜು ಸಮೀಪದಲ್ಲಿ ವಕ್ಫ್ ಮಂಡಳಿಗೆ ಸೇರಿದ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಸಂಕೀರ್ಣದ ಮೇಲೆ ಸೋಮವಾರ ಬೆಳಿಗ್ಗೆ ಎರಡು ಅಪರಿಚಿತ ಶವಗಳು ಪತ್ತೆಯಾಗಿವೆ.

40 ರಿಂದ 50ರ ಆಸುಪಾಸು ವಯೋಮಾನದ ಪುರುಷ ಮತ್ತು ಮಹಿಳೆಯ ಶವಗಳು‌ ರಕ್ತಸ್ರಾವವಾದ ಸ್ಥಿತಿಯಲ್ಲಿ ಕಂಡುಬಂದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಎರಡು ದಿನಗಳ ಹಿಂದೆ ಸಾವು ಉಂಟಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತಪಟ್ಟವರು‌ ಯಾರು? ಇದು ಕೊಲೆಯೋ, ಆತ್ಮಹತ್ಯೆಯೋ ಎಂಬುದು ತನಿಖೆಯ ನಂತರವಷ್ಟೇ ಹೇಳಲು ಸಾಧ್ಯ ಎಂದು ಪೊಲೀಸರು ತಿಳಿಸಿದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು