ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ | ಹೋಬಳಿಗೆ ಎರಡು ರೈತ ಕಂಪನಿ

ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮದ ಅನುಷ್ಠಾನ; ಜಿಲ್ಲಾಧಿಕಾರಿ ಅಭಿಮತ
Last Updated 14 ಆಗಸ್ಟ್ 2020, 16:42 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರತಿ ಹೋಬಳಿಗೆ ಎರಡು ರೈತ ಉತ್ಪಾದನಾ ಕಂಪನಿ ತೆರೆಯಬೇಕು. ಪ್ರಸ್ತುತ ಬೇಡಿಕೆ ಇರುವ ಧಾನ್ಯಗಳು ಮತ್ತು ಬೆಳೆಗಳನ್ನು ಬೆಳೆಯಲು ರೈತರಿಗೆ ಕೃಷಿ ಇಲಾಖೆ ಅಧಿಕಾರಿಗಳು ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತ ಉತ್ಪಾದಕರ ಸಂಸ್ಥೆಗಳ ರಚನೆ ಮತ್ತು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಮಗ್ರ ಕೃಷಿ ಅಭಿವೃದ್ಧಿ ಕಾರ್ಯಕ್ರಮದ ಅನುಷ್ಠಾನ ಕುರಿತು ಸಭೆಯಲ್ಲಿ ಮಾತನಾಡಿದರು.

ಸಿರಿಧಾನ್ಯಗಳಿಂದ ತಯಾರಾಗುವ ಉತ್ಪನ್ನಗಳಿಗೆ ಬೇಡಿಕೆ ಇದೆ. ಆದ್ದರಿಂದ ರೈತರಿಗೆ ಸಿರಿಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹ ನೀಡಬೇಕು. ಅವುಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ ಕೊಡಬೇಕು. ಸಿರಿಧಾನ್ಯಗಳ ಕುರಿತು ಸೂಕ್ತ ಮಾಹಿತಿ ನೀಡಬೇಕು ಎಂದರು.

ರೈತರು ತಮ್ಮ ಆ್ಯಂಡ್ರಾಯ್ಡ್‌ ಮೊಬೈಲ್‌ನ ಪ್ಲೇಸ್ಟೋರ್‌ ಮೂಲಕ ಬೆಳೆ ಸಮೀಕ್ಷೆ ಆ್ಯಪ್‍ ಡೌನ್‌ಲೋಡ್ ಮಾಡಿಕೊಳ್ಳಬೇಕು. ಮೊಬೈಲ್ ನಂಬರ್ ಅನ್ನು ಓಟಿಪಿ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾದ ನಂತರ ತಮ್ಮ ಜಿಲ್ಲೆ, ತಾಲೂಕು, ಗ್ರಾಮ, ಸರ್ವೆ ನಂಬರ್ ಸೇರಿದಂತೆ ಜಮೀನಿನ ವಿವರಗಳನ್ನು ನಮೂದಿಸಬೇಕು.

ಜಮೀನಿನ ಮಾಹಿತಿ ಹಾಗೂ ತಮ್ಮ ಗ್ರಾಮದ ನಕ್ಷೆಯನ್ನು ಡೌನ್‌ಲೋಡ್ ಮಾಡಿ ಜಮೀನಿನಲ್ಲಿ ಬೆಳೆದ ಬೆಳೆ ಹಾಗೂ ಇತರೆ ವಿವರಗಳನ್ನು, ಛಾಯಾ ಚಿತ್ರಗಳನ್ನು ಮೊಬೈಲ್ ಆ್ಯಪ್‍ನಲ್ಲಿ ಸಂಗ್ರಹಿಸಿ ಅಪ್‌ಲೋಡ್ ಮಾಡಬೇಕು ಎಂದು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ರಘುನಂದನ್, ರೂಪಾ, ಕೃಷಿ ಇಲಾಖೆಯ ಉಪ ನಿರ್ದೇಶಕಿ ಅನುರೂಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT