ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರು ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ಗರಿ

ರಾಗಿಮಾಕಲಹಳ್ಳಿಯ ಚಂದ್ರಶೇಖರ್‌, ಮಿಟ್ಟೇಮರಿಯ ಕೀರ್ತಿ ಬಸಪ್ಪ
Last Updated 3 ಸೆಪ್ಟೆಂಬರ್ 2022, 4:05 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ/ಬಾಗೇಪಲ್ಲಿ: 2022–23ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟವಾಗಿದ್ದು ಜಿಲ್ಲೆಯ ಇಬ್ಬರು ಶಿಕ್ಷಕರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಗಿಮಾಕಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಎಚ್‌.ಎಲ್ ಚಂದ್ರಶೇಖರ್ ಮತ್ತು ಪ್ರೌಢಶಾಲೆ ವಿಭಾಗದಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಮಿಟ್ಟೇಮರಿ ಸರ್ಕಾರಿ ಪ್ರೌಢಶಾಲೆಯ ಸಂಗೀತ ಶಿಕ್ಷಕರಾದ ಕೀರ್ತಿ ಬಸಪ್ಪ ಲಗಳಿ ಅವರಿಗೆ ಪ್ರಶಸ್ತಿ ದೊರೆತಿದೆ.

ಚಂದ್ರಶೇಖರ್ ಕಳೆದ 8 ವರ್ಷಗಳಿಂದರಾಗಿಮಾಕಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಅವರು ಪ್ರಭಾರ ಮುಖ್ಯಶಿಕ್ಷಕರಾಗಿದ್ದಾರೆ. ಶಿಥಿಲವಾಗಿದ್ದ ಶಾಲೆಯನ್ನು ಉತ್ತಮಹಾದಿಗೆ ತರುವಲ್ಲಿ ಚಂದ್ರಶೇಖರ್ ಅವರ ಶ್ರಮ ಅಪಾರವಾಗಿದೆ.

‘ಪ್ರಶಸ್ತಿ ದೊರೆತಿರುವುದು ಸಂತಸವಾಗಿದೆ. ಗ್ರಾಮಸ್ಥರು, ಎಸ್‌ಡಿಎಂಸಿ, ದಾನಿಗಳು, ಸಂಘ ಸಂಸ್ಥೆಗಳ ಸಹಕಾರದಿಂದ ಶಾಲೆಯನ್ನು ಉತ್ತಮವಾಗಿ ನಿರ್ಮಾಣ ಮಾಡಿದ್ದೇವೆ’ ಎಂದು ಚಂದ್ರಶೇಖರ್ ‘ಪ್ರಜಾವಾಣಿ’ಗೆ
ತಿಳಿಸಿದರು.

‘ಎಂಟು ವರ್ಷಗಳ ಹಿಂದೆ ನಾನು ಈ ಶಾಲೆಗೆ ಬಂದಾಗ ಕಟ್ಟಡಗಳು ದುರಸ್ತಿಗೆ ಬಂದಿದ್ದವು. ಪರಿಶ್ರಮ ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್ ಒಂದು ಕೊಠಡಿ ಕಟ್ಟಿಸಿಕೊಟ್ಟರು. ನರೇಗಾ ಯೋಜನೆಯಡಿ ಕಾಂಪೌಂಡ್, ಶೌಚಾಲಯ ನಿರ್ಮಿಸಲಾಯಿತು. ನಂತರ ವಿವಿಧ ಸಂಘ ಸಂಸ್ಥೆಗಳು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ನೆರವಿನಲ್ಲಿ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲಾಯಿತು’ ಎಂದು ಹೇಳಿದರು.

ಸಂಗೀತ ಶಿಕ್ಷಕಿಗೆ ಪ್ರಶಸ್ತಿ: ಬಾಗೇಪಲ್ಲಿ ತಾಲ್ಲೂಕಿನ ಮಿಟ್ಟೇಮರಿ ಸರ್ಕಾರಿ ಪ್ರೌಢಶಾಲೆಯ ಸಂಗೀತ ಶಿಕ್ಷಕಿ ಕೀರ್ತಿ ಬಸಪ್ಪ ಲಗಳಿ ಅವರುಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನವರಾಗಿದ್ದಾರೆ.

ಸ್ನಾತಕೊತ್ತರ ಪದವೀಧರೆಯಾದ ಇವರು ಭರತನಾಟ್ಯ, ಜನಪರ ನೃತ್ಯಗಳ ಸ್ಪರ್ಧೆಗಳಲ್ಲಿ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಉತ್ತಮ ಕರಾಟೆ ಪಟು ಆಗಿದ್ದಾರೆ. ಡೊಳ್ಳುಕುಣಿತ, ಪೂಜಾಕುಣಿತ, ಪಟದ ಕುಣಿತ, ಭರತನಾಟ್ಯ ಮತ್ತಿತರ ಕಲೆಗಳನ್ನು ಮಕ್ಕಳಿಗೆಕಲಿಸುತ್ತಿದ್ದಾರೆ.

‘ರಾಜ್ಯ ಮಟ್ಟದಲ್ಲಿ ಉತ್ತಮ ಶಿಕ್ಷಕಿಯಾಗಿ ಆಯ್ಕೆ ಆಗಿರುವುದು ಸಂತಸ ತಂದಿದೆ. ನಾನು ಕಲಿತ ವಿದ್ಯೆಯನ್ನು ಮಕ್ಕಳಿಗೆ ಕಲಿಸಲು ಈ ಪ್ರಶಸ್ತಿಯು ಮತ್ತಷ್ಟು ಉತ್ಸಾಹ ಹೆಚ್ಚಿಸಿದೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹಿರಿಯ ಸಾಹಿತಿಗಳ ಮಾರ್ಗದರ್ಶನವೇ ನನಗೆ ಪ್ರೇರಕ ಶಕ್ತಿಯಾಗಿದೆ’ ಎಂದು ಕೀರ್ತಿ ಬಸಪ್ಪ ಲಗಳಿ ‘ಪ್ರಜಾವಾಣಿಗೆ
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT