ಮಂಗಳವಾರ, ಆಗಸ್ಟ್ 16, 2022
30 °C

ದೊಡ್ಡಗಂಜೂರು ಗ್ರಾ.ಪಂ. ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂತಾಮಣಿ: ತಾಲ್ಲೂಕಿನ ದೊಡ್ಡಗಂಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ಧಿಮಠ ಕ್ಷೇತ್ರದಿಂದ ಜೆಡಿಎಸ್ ಬೆಂಬಲಿತ ಇಬ್ಬರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಿದ್ಧಿಮಠ ಕ್ಷೇತ್ರದ ಎರಡು ಸ್ಥಾನಗಳಿಗೆ ಮುಜೀಬ್ ಉನ್ನೀಸಾ ಮತ್ತು ಅಪ್ಸರ್ ಪಾಷಾ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಶನಿವಾರ ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ ಎರಡು ನಾಮಪತ್ರಗಳು ಅಂಗೀಕಾರಗೊಂಡಿವೆ. ಹೀಗಾಗಿ ಇಬ್ಬರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಪದಾಧಿಕಾರಿಗಳ ಆಯ್ಕೆ: ಕರ್ನಾಟಕ ರಕ್ಷಣಾ ವೇದಿಕೆಯ (ಕನ್ನಡಿಗರ ಸಾರಥ್ಯದಲ್ಲಿ) ತಾಲ್ಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಆರ್. ಲಕ್ಷ್ಮಿಪತಿ ಹಾಗೂ ಜಿಲ್ಲಾ ಖಜಾಂಚಿಯಾಗಿ ಕೆ.ಎಲ್. ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಗಿದೆ.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎನ್. ಅಂಬರೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ
ಅಧ್ಯಕ್ಷರ ನೇಮಕ ಮಾಡಲಾಯಿತು.

ನಂತರ ಮಾತನಾಡಿದ ಅವರು, ಸರ್ಕಾರದಿಂದಲೇ ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ. ರಾಜಕೀಯದ ಹಿನ್ನೆಲೆಯಲ್ಲಿ ಮತ ಗಳಿಸಲು ಸರ್ಕಾರವೇ ಕನ್ನಡಿಗರನ್ನು ವಂಚಿಸುತ್ತಿದೆ. ಸರ್ಕಾರದ ನೀತಿಗಳನ್ನು ವಿರೋಧಿಸಿ ಹೋರಾಟಗಳನ್ನು ರೂಪಿಸಬೇಕಾಗಿದೆ. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೋರಾಟಗಳಿಗೆ ಸಿದ್ಧರಾಗಬೇಕು ಎಂದರು.

ಜಿಲ್ಲಾ ಸಂಚಾಲಕ ಲಿಂಗಪ್ಪ, ತಾಲ್ಲೂಕು ಘಟಕದ ಉಪಾಧ್ಯಕ್ಷ ಕೆ.ಆರ್. ಮುರಳಿಮೋಹನ್, ಕಾರ್ಯದರ್ಶಿ ಎ. ಮಂಜುನಾಥ್, ಮುಖಂಡರಾದ ರವಿ, ಕಾಡಹಳ್ಳಿ ರಾಜಕುಮಾರ್, ಹರೀಶ್, ಕಲ್ಯಾಣಪ್ರಭು, ಕೆ. ಸುಧಾಕರ್, ಎನ್. ಮಂಜುನಾಥ್, ಪಾಪಣ್ಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.