ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಬಂದ್‌ಗೆ ಸಿಗದ ಜನ ಬೆಂಬಲ

ಅಂತರ ಕಾಯ್ದುಕೊಂಡ ಸಂಘಟನೆಗಳು, ಜನಜೀವನಕ್ಕೆ ತಟ್ಟದ ಬಂದ್‌ ಬಿಸಿ
Last Updated 13 ಫೆಬ್ರುವರಿ 2020, 13:13 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಎಲ್ಲ ತಾಲ್ಲೂಕುಗಳಲ್ಲಿಯೂ ಗುರುವಾರ ಜನಜೀವನ ಎಂದಿನಂತಿತ್ತು. ನಸುಕಿನಿಂದಲೇ ವಾಹನ ಸಂಚಾರ ಸುಗಮವಾಗಿತ್ತು. ಹಾಲು, ಹಣ್ಣು, ತರಕಾರಿ, ಆರೋಗ್ಯ ಸೇವೆ, ಔಷಧಿ ಅಂಗಡಿಗಳು, ಪೆಟ್ರೋಲ್‌ ಬಂಕ್‌ಗಳು, ಹೊಟೇಲ್‌ಗಳು ಎಂದಿನಂತೆ ವಹಿವಾಟು ನಡೆಸಿದವು. ಎಲ್ಲ ಸೇವೆಗಳು ಸುಲಲಿತವಾಗಿ ಜನರಿಗೆ ತಲುಪಿದವು. ಹೀಗಾಗಿ, ಬಂದ್‌ನ ಚಿತ್ರಣವೇ ಎಲ್ಲಿಯೂ ಗೋಚರಿಸಲಿಲ್ಲ.

ಸಾರಿಗೆ ಸಂಚಾರದಲ್ಲೂ ಯಾವುದೇ ಅಡಚಣೆ ಇರಲಿಲ್ಲ. ಸರ್ಕಾರಿ ಮತ್ತು ಖಾಸಗಿ ಬಸ್‌ಗಳು, ಆಟೊಗಳ ಸಂಚಾರ ಸಹಜವಾಗಿತ್ತು. ಜಿಲ್ಲೆಯಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಿರಲಿಲ್ಲ. ಹೀಗಾಗಿ, ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ಬಂದ್‌ ಪ್ರಯುಕ್ತ ನಗರದ ಪ್ರಮುಖ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಜಿಲ್ಲಾ ಕೇಂದ್ರದಲ್ಲಿ ಯಾವುದೇ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT