ಗೌರಿಬಿದನೂರು: ತಾಲ್ಲೂಕಿನ ಪುರಾಣ ಪ್ರಸಿದ್ಧ ವಿದುರಾಶ್ವತ್ಥದಲ್ಲಿ ವಿದುರಾಶ್ವತ್ಥ ಅಶ್ವಥ ನಾರಾಯಣಸ್ವಾಮಿಯ ರಥೋತ್ಸವವು ಗುರುವಾರ ಅದ್ದೂರಿಯಾಗಿ ನೆರವೇರಿತು.

ರಥೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಪುಟ್ಟಸ್ವಾಮಿಗೌಡ, ವಿದುರನ ಭಕ್ತಿಗೆ ಒಲಿದು ನೆಲೆನಿಂತ ವಿದುರ ಅಶ್ವತ್ಥನಾರಾಯಣ ಸ್ವಾಮಿಯ ಕೃಪೆ ನಾಡಿನ ಜನರ ಮೇಲೆ ಇರಲಿ. ಉತ್ತಮ ಮಳೆ, ಬೆಳೆಯಾಗಿ ಸರ್ವರೂ ಸುಖ, ಸಂತೋಷದಿಂದ ಜೀವನ ಸಾಗಿಸಲೆಂದು ಪ್ರಾರ್ಥಿಸಿದರು.

ರಥೋತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಹೋಮ ಹವನಗಳು ಸೇರಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ಜರುಗಿದವು. ಭಕ್ತರು ದೇಗುಲದ ಮುಂದೆ ಸಾಲುಗಟ್ಟಿ ನಿಂತು ಅಶ್ವತ್ಥನಾರಾಯಣಸ್ವಾಮಿಗೆ ಪೂಜೆ ಸಲ್ಲಿಸಿದರು.

ರಥೋತ್ಸವಕ್ಕೂ ಮುನ್ನ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ಮಂಗಳವಾದ್ಯಗಳೊಂದಿಗೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಏರಿಸಿ, ಭಕ್ತರು ರಥ ಎಳೆದರು. ಸಾಗುವ ಹಾದಿಯಲ್ಲಿ ಭಕ್ತರು ಬಾಳೆಹಣ್ಣು-ದವನ ಎಸೆದು ಭಕ್ತಿ ಸಮರ್ಪಿಸಿದರು.

ನೆರೆದಿದ್ದ ಭಕ್ತರಿಗೆ ದೇವಸ್ಥಾನದ ವತಿಯಿಂದ ಕುಡಿಯುವ ನೀರು, ಪಾನಕ, ಮಜ್ಜಿಗೆ, ಕೋಸಂಬರಿ ಮತ್ತು ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ತಾಲ್ಲೂಕು ಹಾಗೂ ಜಿಲ್ಲೆಯ ಸುತ್ತಮುತ್ತಲ ಗ್ರಾಮಗಳು ಹಾಗೂ ಆಂಧ್ರಪ್ರದೇಶದ ವಿವಿಧೆಡೆಯಿಂದ 15 ಸಾವಿರಕ್ಕೂ ಹೆಚ್ಚು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು.

ರಥೋತ್ಸವದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಪೋಲಿಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ರಥೋತ್ಸವದಲ್ಲಿ ತಹಶೀಲ್ದಾರ್ ಅರವಿಂದ್.ಕೆ.ಎಂ, ವಿದುರಾಶ್ವತ್ಥ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಎ. ಮರಿರಾಜು, ವಕೀಲ ರಂಗರಾಜು, ರಾಜೇಂದ್ರ ಪ್ರಸಾದ್, ಶ್ರೀನಿವಾಸಗೌಡ ಹಾಗೂ ಸ್ಥಳೀಯ ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-16-1139724822

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.