ವಿಜಯಪುರ (ದೇವನಹಳ್ಳಿ): ರಾಜ್ಯ ಕಾಂಗ್ರೆಸ್ ಸರ್ಕಾರ ಆರಂಭ ಮಾಡಿರುವ `ಶಕ್ತಿ' ಯೋಜನೆಯ ಉಚಿತ ಸಾರಿಗೆ ಬಸ್ ಪ್ರಯಾಣ ಜಿಲ್ಲೆಯ ಮಹಿಳೆಯರಿಗೆ ಎಷ್ಟು ಅನುಕೂಲವಾಗಿದೆಯೇ ಅಷ್ಟೇ ಪ್ರಮಾಣದಲ್ಲಿ ಇತರ ಪ್ರಯಾಣಿಕರಿಗೆ ಅನಾನುಕೂಲವಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ಪ್ರಮುಖವಾಗಿ ಬಾಧಿತರಾಗಿದ್ದಾರೆ. ಸದಾ ತುಂಬಿರುವ ಬಸ್ನಲ್ಲಿ ಏರಲಾಗದೆ, ಸರಿಯಾದ ಸಮಯಕ್ಕೆ ಶಾಲಾ–ಕಾಲೇಜಿಗೆ ತೆರಳಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ.

ಶಾಲಾ-ಕಾಲೇಜುಗಳ ಸಮಯಕ್ಕೆ ಹೆಚ್ಚುವರಿ ಬಸ್ಗಳ ಕಲ್ಪಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ, ಒತ್ತಾಯಗಳಿಗೆ ಮಣಿಯದ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿಧಿಯಿಲ್ಲದೆ ವಿದ್ಯಾರ್ಥಿಗಳು ಬಸ್ ಬಸ್ನಲ್ಲಿ ಫುಟ್ಬೋರ್ಡ್ನಲ್ಲೇ ನೇತಾಡಿಕೊಂಡು ಸಾವಿನೊಂದಿಗೆ ಸೆಣಸುತ್ತಾ ಪ್ರಯಾಣಿಸುತ್ತಿರುವ ವಿದ್ಯಾರ್ಥಿಗಳ ಸಂಕಷ್ಟ ಕೇಳುವವರಿಲ್ಲವಾಗಿದ್ದಾರೆ.

ಶಕ್ತಿ ಯೋಜನೆ ಜಾರಿಯಾದ ಮೇಲೆ ಪ್ರತಿ ನಿತ್ಯ ಶಾಲಾ-ಕಾಲೇಜು ಆರಂಭದ ಸಮಯ ಬೆಳಗ್ಗೆ ಮತ್ತು ಸಾಯಂಕಾಲ ಮನೆಗೆ ಪಾಪಸ್ ಆಗುವ ವೇಳೆ ಸಾರಿಗೆ ಬಸ್ ಏರುವುದೇ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಅಲ್ಲದೇ ಉಚಿತ ಸಾರಿಗೆ ಬಸ್ಗಳಲ್ಲಿ ದುಪ್ಪಟ್ಟು ಪ್ರಯಾಣಿಕರ ಸಂಚಾರದಿಂದ ಬಸ್ ಹತ್ತಲು, ಇಳಿಯಲು ವಿದ್ಯಾರ್ಥಿಗಳು ಹರಸಾಹಸ ಪಡುವಂತಾಗಿದೆ. ಅದರಲ್ಲೂ ವಿದ್ಯಾರ್ಥಿನಿಯರು ಹೇಳಿಕೊಳ್ಳಲಾಗದಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಬೆಂಗಳೂರು- ಶಿಡ್ಲಘಟ್ಟ ಮಾರ್ಗ ಹಾಗೂ ಚಿಕ್ಕಬಳ್ಳಾಪುರ-ಕೋಲಾರ ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳು ಬೆಳಗ್ಗೆ ಮತ್ತು ಸಂಜೆ ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ಹೀಗಾಗಿ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಮಾತ್ರ ಚಾಲಕರು ಬಸ್ ನಿಲುಗಡೆ ಮಾಡುತ್ತಿದ್ದು, ಪ್ರಯಾಣಿಕರ ಪಾಲಿಗೆ ಸಾರಿಗೆ ವ್ಯವಸ್ಥೆ ಇದ್ದು ಇಲ್ಲದಂತಾಗಿದೆ.

ಗ್ರಾಮೀಣ ಭಾಗದ ಬಸ್ ನಿಲ್ದಾಣಗಳಲ್ಲಿ ಚಾಲಕರು ಬಸ್ ನಿಲ್ಲಿಸದೇ ಹೋಗುತ್ತಿರುವುದರಿಂದ ಬೆಳಗ್ಗೆ ಸಮಯದಲ್ಲಿ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳುವುದು ತಡವಾಗುತ್ತಿದ್ದು, ಇದರಿಂದ ನಾನಾ ತೊಂದರೆ ಅನುಭವಿಸುವಂತಾಗಿದೆ. ಇನ್ನಾದರೂ ಸಂಬಂಧಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ವಿದ್ಯಾರ್ಥಿ ತ್ಯಾಗರಾಜ್ ಆಗ್ರಹಿಸಿದರು.

ಬಸ್ಗಳ ಸಮಸ್ಯೆ ಹೀಗೆ ಮುಂದುವರೆದರೆ ಸದ್ಯ ಬೇಸಿಗೆ ರಜೆ ಮುಗಿಸಿ ಶಾಲೆಗೆ ಬರುವ ಮಕ್ಕಳು ದುಪ್ಪಟ್ಟು ಸಮಸ್ಯೆ ಎದುರಿಸಲಿದ್ದಾರೆ. ಸಂಬಂಧಿಸಿದ ಅಧಿಕಾರಿಗಳು ಈಗಲೇ ಎಚ್ಚೇತ್ತುಕೊಂಡು ಬಸ್ ಸಮಸ್ಯೆಯನ್ನು ಪರಿಹರಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬಸ್ ತಡೆದು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿದ್ಯಾರ್ಥಿ ಸಾಗರ್ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-1542897489

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.