ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ವಿಕಾಸ; ಜುಲೈಯೊಳಗೆ ಪೂರ್ಣಗೊಳಿಸಿ

Last Updated 27 ಜೂನ್ 2020, 7:50 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: 'ಜಿಲ್ಲೆಯಲ್ಲಿ ‘ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ’ ಅಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಜುಲೈ ಒಳಗಾಗಿ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಪ್ರತಿಯೊಂದು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಮಗಾರಿ ಸ್ಥಳದಲ್ಲಿ ಯೋಜನೆಯ ಮಾಹಿತಿ ಉಳ್ಳ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಮುಕ್ತಾಯಗೊಂಡ ಕಾಮಗಾರಿಗಳಿಗೆ ಹಣ ಬಳಕೆ ಪ್ರಮಾಣ ಪತ್ರ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆಆರ್‌ಐಡಿಎಲ್‌ ಕಾರ್ಯಪಾಲಕ ಎಂಜಿನಿಯರ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಹಕ ಅಧಿಕಾರಿಗಳು ಮತ್ತು ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT