ಬುಧವಾರ, ನವೆಂಬರ್ 25, 2020
22 °C

ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೌರಿಬಿದನೂರು: ನಗರ ಹೊರವಲಯದ ಇಡಗೂರು ರಸ್ತೆಯಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಗರಸಭೆ ಅಧ್ಯಕ್ಷೆ ಕೆ.ಎಂ. ಗಾಯತ್ರಿ ಬಸವರಾಜ್ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ನಗರದಲ್ಲಿ ನಿತ್ಯ ಸಂಗ್ರಹವಾಗುವ ತ್ಯಾಜ್ಯವನ್ನು ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ವಿಲೇವಾರಿ ಮಾಡಲು ಮುಂಜಾಗ್ರತೆವಹಿಸಬೇಕಿದೆ. ಈ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ನಿತ್ಯ ವ್ಯವಸ್ಥಿತವಾಗಿ ಈ ಘಟಕಕ್ಕೆ ಕೊಂಡೊಯ್ಯಬೇಕು ಎಂದರು.

ತ್ಯಾಜ್ಯವನ್ನು ಹಸಿ ಕಸ ಮತ್ತು ಒಣ ಕಸವನ್ನಾಗಿ ಬೇರ್ಪಡಿಸಿ ಯಂತ್ರೋಪಕರಣಗಳ ಮೂಲಕ ಸಾವಯವ ಗೊಬ್ಬರವಾಗಿ ಮಾಡುವುದು ಅತ್ಯವಶ್ಯಕವಾಗಿದೆ. ಈಗಾಗಲೇ, ವೈಜ್ಞಾನಿಕ ವಿಧಾನದಡಿ ತ್ಯಾಜ್ಯ ಘಟಕ ನಿರ್ಮಾಣ ಮಾಡಲಾಗಿದೆ. ಅದರ ನಿರ್ವಹಣೆಯಲ್ಲಿ ಯಾವುದೇ ಲೋಪ ನಡೆಯದಂತೆ ನೋಡಿಕೊಳ್ಳಬೇಕು. ಈ ಘಟಕದಿಂದ ನೆರೆಯ ರೈತರಿಗೆ ತೊಂದರೆಯಾಗದಂತೆ ‌ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕಿದೆ ಎಂದು ಹೇಳಿದರು.

ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಸುರೇಶ್, ಸದಸ್ಯರಾದ ಖಲೀಂ ಉಲ್ಲಾ, ಮಂಜುಳಾ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು