ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ದಿನಾಚರಣೆ: ಜಿಲ್ಲಾಮಟ್ಟದ ಸ್ಪರ್ಧೆ

Last Updated 18 ಡಿಸೆಂಬರ್ 2019, 14:32 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಪ್ರಯುಕ್ತ ನಗರದ ಸರ್ಕಾರಿ ಪ್ರೌಢಶಾಲೆ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ‘ಚುನಾವಣೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಪ್ರತಿ ವರ್ಷ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು 18 ವರ್ಷ ತುಂಬಿದ ನಂತರ ಮತದಾರರಾಗಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪೋಷಕರಿಗೂ ಕೂಡ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಮತವನ್ನು ಕಡ್ಡಾಯವಾಗಿ ಚಲಾಯಿಸಲು ಪ್ರೇರಣೆ ನೀಡಬೇಕು’ ಎಂದರು.

ಪ್ರಬಂಧ, ರಸಪ್ರಶ್ನೆ, ನಾಟಕ ಸ್ಪರ್ಧೆಗಳು ನಡೆದವು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೀತಾರಾಮರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಜಿ.ನಾಗೇಶ್, ಪ್ರಾಂಶುಪಾಲ ಮೋಹನ್‌ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಲಕ್ಷ್ಮೀಕಾಂತ್, ಮುಖ್ಯ ಶಿಕ್ಷಕಿ ಅರುಣಾ, ಸ್ವೀಪ್ ಸಮಿತಿಯ ಸದಸ್ಯರಾದ ರವಿಕುಮಾರ್, ಸತೀಶ್ ಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT