ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿ ಪರಿಷ್ಕರಣೆ

Last Updated 30 ನವೆಂಬರ್ 2020, 2:14 IST
ಅಕ್ಷರ ಗಾತ್ರ

ಚಿಂತಾಮಣಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2021 ಅಭಿಯಾನವು ಡಿ. 6 ಮತ್ತು ಡಿ. 13ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಎಲ್ಲ ಮತಗಟ್ಟೆಗಳಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಹನುಮಂತರಾಯಪ್ಪ ತಿಳಿಸಿದರು.

ನಗರದ ನಗರಸಭೆಯ ಮತಗಟ್ಟೆಯಲ್ಲಿ ಭಾನುವಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮತದಾರರಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಸೇರಿಸುವುದು ಅಥವಾ ಬದಲಾವಣೆ, ತಿದ್ದುಪಡಿ ಮಾಡಲಾಗುತ್ತದೆ. ಈ ದಿನಗಳಂದು ಎಲ್ಲ ಮತಗಟ್ಟೆಗಳಲ್ಲಿ ಅಧಿಕಾರಿಗಳು ಹಾಜರಿರುತ್ತಾರೆ ಎಂದರು.

2021ರ ಜನವರಿ 1ಕ್ಕೆ 18 ವರ್ಷ ಮೇಲ್ಪಟ್ಟ ಎಲ್ಲ ಅರ್ಹ ನಾಗರಿಕರು ಮತದಾರರಾಗಬಹುದು. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರು ಬಿಟ್ಟು ಹೋಗಬಾರದು ಹಾಗೂ ತಪ್ಪುಗಳು ಇರಬಾರದು ಎಂಬುದು ಚುನಾವಣಾ ಆಯೋಗದ ಉದ್ದೇಶವಾಗಿದೆ. ಈ ಹಿನ್ನೆ‌ಲೆಯಲ್ಲಿ ವಿಶೇಷ ಪರಿಷ್ಕರಣೆ ಅಭಿಯಾನ ಆರಂಭಿಸಲಾಗಿದೆ ಎಂದರು.

ಪ್ರತಿಯೊಬ್ಬ ನಾಗರಿಕರು ಮತ ಚಲಾಯಿಸಬೇಕು. ಶೇಕಡಾವಾರು ಮತದಾನದ ಪ್ರಮಾಣ ಹೆಚ್ಚಾದರೆ ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಯಾಗುತ್ತವೆ. ಮತದಾರರು, ರಾಜಕೀಯ ಪಕ್ಷದ ಮುಖಂಡರು, ಸಂಘ– ಸಂಸ್ಥೆಗಳ ಮುಖಂಡರು ಮತದಾರರ ಪಟ್ಟಿಗಳನ್ನು ಪರಾಮರ್ಶಿಸಬೇಕು. ಅಕಸ್ಮಾತ್ ಹೆಸರು ಬಿಟ್ಟು ಹೋಗಿದ್ದರೆ, ತಪ್ಪುಗಳಿದ್ದರೆ ಈಗ ಸರಿಪಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಚುನಾವಣೆಯ ದಿನ ಬಂದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ, ಮತಗಟ್ಟೆ ಬದಲಾವಣೆಯಾಗಿದೆ ಎಂದು ದೂರುವುದರಿಂದ ಪ್ರಯೋಜನವಾಗುವುದಿಲ್ಲ. ಈಗ ಎಚ್ಚೆತ್ತುಕೊಂಡು ಸರಿಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT