ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ

ಮನೆ-ಮನೆ ಸಮೀಕ್ಷೆ ಆರಂಭ
Published 22 ಆಗಸ್ಟ್ 2024, 14:17 IST
Last Updated 22 ಆಗಸ್ಟ್ 2024, 14:17 IST
ಅಕ್ಷರ ಗಾತ್ರ

ಚಿಂತಾಮಣಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025 ಪ್ರಕ್ರಿಯೆ ಆರಂಭವಾಗಿದ್ದು, ಬಿಎಲ್‌ಒ ತಂತ್ರಾಂಶದ ಮೂಲಕ ಮನೆ ಮನೆ ಸಮೀಕ್ಷೆಯು ಆ.20ರಿಂದ ಪ್ರಾಂಭವಾಗಿದ್ದು, ಅಕ್ಟೋಬರ್ 18 ವರೆಗೆ ನಡೆಯಲಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಪ್ರತಿವರ್ಷ ಜನವರಿ 1ಕ್ಕೆ 18 ವರ್ಷ ಪೂರೈಸಿರುವವರನ್ನು ಮತದಾರರಪಟ್ಟಿಗೆ ಸೇರಿಸಲಾಗುತ್ತದೆ. ಜತೆಗೆ ಮತದಾರರ ಪಟ್ಟಿಯಲ್ಲಿ ಹೆಸರಿನ ವರ್ಗಾವಣೆ, ಬದಲಾವಣೆ ಮತ್ತಿತರ ತಿದ್ದುಪಡಿಗೂ ಅವಕಾಶವಿದೆ. ಮೊದಲಿಗೆ ಬೂತ್ ಮಟ್ಟದ ಅಧಿಕಾರಿಗಳು ಅ.18 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಅ.19ರಿಂದ 28 ರವರೆಗೆ ಮತದಾರರಪಟ್ಟಿಯ ಪರಿಷ್ಕರಣೆ ಸಿದ್ಧತೆ ನಡೆಯುತ್ತವೆ.

ಅಕ್ಟೋಬರ್ 29 ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗುತ್ತದೆ. ಅ.29 ರಿಂದ ನ.28 ರವರೆಗೆ ಮತದಾರರ ಪಟ್ಟಿ ಪರಿಶೀಲಿಸಿ ಆಕ್ಷೇಪಣೆ ಸಲ್ಲಿಕೆ ಅವಕಾಶ ನೀಡಲಾಗುತ್ತದೆ. ಡಿ.24 ರವರೆಗೆ ಆಕ್ಷೇಪಣೆ ಪರಿಶೀಲಿಸಿ ಕ್ರಮವಹಿಸಲಾಗುತ್ತದೆ. 2025ರ ಜನವರಿ 1ರಂದು ಆಕ್ಷೇಪಣೆ ನಿವಾರಣೆಯ ನಂತರದ ಹೊಸ ಮತದಾರರ ಪಟ್ಟಿ ಮುದ್ರಣ ಆರಂಭವಾಗುತ್ತದೆ. ಜನವರಿ 6 ರಂದು ಅಂತಿಮ ಮತದಾರರಪಟ್ಟಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಸಮೀಕ್ಷೆ ಸಂದರ್ಭದಲ್ಲಿ ಹೊಸ ಮನೆಗಳಲ್ಲಿ ವಾಸವಿರುವ ಅರ್ಹರು ಹಾಗೂ 18 ವರ್ಷ ಪೂರೈಸಿರುವವರನ್ನು ಮತದಾರರಪಟ್ಟಿಗೆ ಸೇರ್ಪಡೆ ಮಾಡಲಾಗುತ್ತದೆ. ಅಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡಿರುವವರನ್ನು ಮತ್ತು ಮೃತಪಟ್ಟವರನ್ನು ಪಟ್ಟಿಯಿಂದ ತೆಗೆದು ಹಾಕಲಾಗುತ್ತದೆ.

ಚುನಾವಣಾ ಆಯೋಗದ ಮತದಾರರ ಸಹಾಯವಾಣಿ ಮೊಬೈಲ್ ಅಪ್ಲಿಕೇಷನ್ ಮತ್ತು ವೋಟರ್ ಸರ್ವೀಸ್ ಪೋರ್ಟಲ್ ಬಳಸಿ ಮತದಾರರಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರು, ಸಂಘ–ಸಂಸ್ಥೆಗಳ ಮತ್ತು ರಾಜಕೀಯ ಪಕ್ಷಗಳ ಮುಖಂಡರು ಮತದಾರರಪಟ್ಟಿಯನ್ನು ಪರಿಶೀಲಿಸಿ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಅರ್ಹ ಮತದಾರರ ಹೆಸರು ಸೇರ್ಪಡೆ ಮಾಡಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

.
.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT