ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿಗೆ ಮತದಾರ ಮರುಳಾಗುವುದಿಲ್ಲ: ವೈ.ಎ.ನಾರಾಯಣ ಸ್ವಾಮಿ

Published 14 ಏಪ್ರಿಲ್ 2024, 14:16 IST
Last Updated 14 ಏಪ್ರಿಲ್ 2024, 14:16 IST
ಅಕ್ಷರ ಗಾತ್ರ

ಸಾದಲಿ: ಗ್ಯಾರಂಟಿಗಳನ್ನು ನಂಬಿ ಚುನಾವಣೆ ನಡೆಸಲು ಹೊರಟಿರುವ ಕಾಂಗ್ರೆಸ್, ರಾಜ್ಯ ಮತ್ತು ದೇಶವನ್ನು ದಿವಾಳಿ ಮಾಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಹೇಳಿದರು.

ಸಾದಲಿ ಹೋಬಳಿಯ ದಿಬ್ಬೂರಹಳ್ಳಿಯಲ್ಲಿ ಭಾನುವಾರ ನಡೆದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ಅವರನ್ನು ಅವಮಾನಿಸಿದ್ದು ಕಾಂಗ್ರೆಸ್ ಪಕ್ಷ. ಇಂದು ಅವರು ಅಂಬೇಡ್ಕರ್ ಮತ್ತು ಸಂವಿಧಾನ ಬಳಸಿಕೊಂಡು ಚುನಾವಣೆಗೆ ಹೊರಟಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಗೆಲ್ಲಿಸಿ ಎಂದರು.

ರಾಜ್ಯ ಬಿಜೆಪಿ ಕಾರ್ಯದರ್ಶಿ ಮುನಿರಾಜು ಮಾತನಾಡಿ, ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಿದ ಕೀರ್ತಿ ನರೇಂದ್ರ ಮೋದಿಗೆ ಸಲ್ಲುತ್ತದೆ. ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಬಲಪಡಿಸಲು ರಾಜ್ಯದಲ್ಲಿ ಮೈತ್ರಿಕೂಟದ ಎಲ್ಲ 28 ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಶಾಸಕ ಬಿ.ಎನ್.ರವಿಕುಮಾರ್ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರ ಆಸೆ ಮತ್ತೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವುದಾಗಿದೆ. ಅದನ್ನು ನನಸು ಮಾಡುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

ಅಭ್ಯರ್ಥಿ ಮಲ್ಲೇಶ್ ಬಾಬು ಮಾತನಾಡಿ, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಕ್ಷೇತ್ರದ ಮತದಾರ ಮೇಲೆ ನಂಬಿಕೆ ಇಟ್ಟು ಮೈತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಒಗ್ಗಟ್ಟು ಪ್ರದರ್ಶನ ಮಾಡುವ ಮೂಲಕ ಗೆಲುವಿಗೆ ಸಹಕಾರ ನೀಡಿ ಎಂದು ಕೋರಿದರು.

ಬಿಜೆಪಿ ಮುಖಂಡ ಸಿಕಲ್ ರಾಮಚಂದ್ರಗೌಡ, ಗೋಪಿನಾಥ್, ಬಂಕ್ ಮುನಿಯಪ್ಪ, ಧನಂಜಯ್ ರೆಡ್ಡಿ, ಸಿಕಲ್ ಆನಂದ್ ಗೌಡ, ಸುರೇಂದ್ರ ಗೌಡ, ಡಿಎಸ್ ರಾಜಣ್ಣ, ಶಿವಾರೆಡ್ಡಿ, ತಾದೂರು ರಘು, ವಿಜಯಾನಂದ, ಸುರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT