ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಘಟ್ಟ | ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ

Last Updated 4 ಡಿಸೆಂಬರ್ 2022, 7:14 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ‘ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಬೇಕು. ನಿಮ್ಮ ಗ್ರಾಮಗಳಲ್ಲಿ ಮತದಾರರ ಸೇರ್ಪಡೆ ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಬೇಕು’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮುನಿರಾಜು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಾಲ್ಲೂಕಿನ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲಾ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಪ್ರಕ್ರಿಯೆ ಹಾಗೂ 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡುವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ತಹಶೀಲ್ದಾರ್ ಬಿ.ಎಸ್. ರಾಜೀವ್ ಮಾತನಾಡಿ, ವಿದ್ಯಾಭ್ಯಾಸದಲ್ಲಿ ಪ್ರಗತಿ ಹೊಂದಲು ನಿರಂತರ ಪ್ರಯತ್ನ ಅಗತ್ಯ. ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಮಾದರಿಯಲ್ಲಿ ಯಶಸ್ಸಿನ ದಡ ಸೇರುವುದು ನಿಮ್ಮ ಗುರಿಯಾಗಬೇಕು ಎಂದು ಕಿವಿಮಾತು
ಹೇಳಿದರು.

ಹಂಡಿಗನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌ ಮೂರ್ತಿ, ಸಿಡಿಪಿಒ ನವತಾಜ್, ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್, ಪಿಡಿಒ ಮಧು, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್, ಬಿಜಿಎಸ್ ಶಾಲೆಯ ಪ್ರಾಂಶುಪಾಲ ಮಹದೇವ್, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT