ಮತದಾನ ಕಡ್ಡಾಯ: ರವೀಂದ್ರ

ಗುಡಿಬಂಡೆ: ‘ಭಾರತ ಪ್ರಪಂಚದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚನೆಯಾದಂತಹ ರಾಷ್ಟ್ರ ಉಳಿಯಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ತಾ.ಪಂ. ಇಒ ರವೀಂದ್ರ ತಿಳಿಸಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಿಕ್ಷಣಾಧಿಕಾರಿ ಸಿದ್ದಪ್ಪ ಮಾತನಾಡಿ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ವೋಟಿಗೂ ಮೌಲ್ಯವಿದೆ. ಇದರಿಂದ ಯಾರು ಮತದಾನವನ್ನು ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.
ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.