ಬಾಗೇಪಲ್ಲಿ: ತಾಲ್ಲೂಕಿನ ರಾಶ್ಚೆರವು ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯನ್ನುನ. 13ರಂದು ನಿಗದಿಪಡಿಸಲಾಗಿದೆ ಎಂದು ಚುನಾವಣಾಧಿಕಾರಿ ಎಂ. ಪ್ರೇಮ್ ಕುಮಾರ್ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ನ. 5 ಹಾಗೂ 6ರಂದು ನಾಮಪತ್ರ ಸಲ್ಲಿಸಬಹುದು. ನ. 7ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ನ. 8ರಂದು ನಾಮಪತ್ರ ಹಿಂತೆದುಕೊಳ್ಳಲು ಕಡೇ ದಿನವಾಗಿದೆ. ಅಗತ್ಯವಿದ್ದರೆ ಉಮೇದುವಾರರಿಗೆ ಚುನಾವಣಾ ಚಿಹ್ನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ನ. 9ರಂದು ಮಾದರಿ ಮತ ಪತ್ರದ ಪ್ರಕಟಣೆ ಮಾಡಲಾಗುವುದು. ನ. 13ರಂದು ಮತದಾನ ನಡೆಯಲಿದೆ. ಮಧ್ಯಾಹ್ನದ ನಂತರ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಆಡಳಿತದ ಮಂಡಳಿಯ 13 ಸ್ಥಾನಗಳ ಪೈಕಿ 12 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.