ಶನಿವಾರ, ನವೆಂಬರ್ 28, 2020
17 °C

ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ತಾಲ್ಲೂಕಿನ ಬೊಮ್ಮೇಪಲ್ಲಿ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎಸ್. ವೆಂಕಟರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ಬೈಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಮದ ವಿಎಸ್ಎಸ್ಎನ್ ಕಚೇರಿಯಲ್ಲಿ ಬುಧವಾರ ಚುನಾವಣೆ ನಡೆಯಿತು. ಈ ಇಬ್ಬರು ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ, ಚುನಾವಣಾಧಿಕಾರಿ ನಳಿನಿ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಅಧ್ಯಕ್ಷ ವೆಂಕಟರೆಡ್ಡಿ ಮಾತನಾಡಿ, ಸಂಘದ ವ್ಯಾಪ್ತಿಯ ಎಲ್ಲ ಗ್ರಾಮದ ರೈತರಿಗೆ ವ್ಯವಸಾಯಕ್ಕೆ ಸಂಬಂಧಿಸಿದ ಉಪಕರಣಗಳು, ರಸಗೊಬ್ಬರ, ಕೀಟನಾಶಕ ಸೇರಿದಂತೆ ಅಗತ್ಯ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. 

ರೈತರು, ಸ್ತ್ರೀಶಕ್ತಿ ಸಂಘ, ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ, ಸಬ್ಸಿಡಿ ಒದಗಿಸಲಾಗುವುದು. ಮಾದರಿ ಸಂಘವನ್ನಾಗಿ ರೂಪಿಸಲಾಗುವುದು. ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ನಿರ್ದೇಶಕರಾದ ಜಿ. ವಿಜಯಭಾಸ್ಕರ ರೆಡ್ಡಿ, ಪಿ.ಎಸ್. ಪಾಂಡುರಂಗರೆಡ್ಡಿ, ಬಿ. ನಾರಾಯಣಸ್ವಾಮಿ, ಬಿ.ಎಸ್. ಕೃಷ್ಣಪ್ಪ, ರಾಜ್‌ಕುಮಾರ್, ಲಕ್ಷ್ಮೀದೇವಮ್ಮ, ವೆಂಕಟೇಶಪ್ಪ, ಸುಬ್ಬಮ್ಮ, ಸಿ.ಎನ್. ಆಂಜನೇಯರೆಡ್ಡಿ, ಬಿ.ವಿ. ಮಾಧವಿ, ಮುಖಂಡರಾದ ಶ್ರೀನಾಥರೆಡ್ಡಿ, ಚೌಡಪ್ಪ, ಸಿ. ನಾರಾಯಣರೆಡ್ಡಿ, ವ್ಯವಸ್ಥಾಪಕ ಬೈರೆಡ್ಡಿ, ಸಿಬ್ಬಂದಿಯಾದ ಚೌಡರೆಡ್ಡಿ, ಬೊಮ್ಮೇಪಲ್ಲಿ ಶ್ರೀನಾಥರೆಡ್ಡಿ, ಗುಂಡ್ಲಹಳ್ಳಿ ಶ್ರೀನಾಥ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.