ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿಡ್ಲಘಟ್ಟ: ಎಚ್‌ಡಿಕೆಗೆ ಅದ್ದೂರಿ ಸ್ವಾಗತ

Published 14 ಜೂನ್ 2024, 15:23 IST
Last Updated 14 ಜೂನ್ 2024, 15:23 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.

ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಶಿಡ್ಲಘಟ್ಟ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ನೇತೃತ್ವದಲ್ಲಿ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಸಂಭ್ರಮದಿಂದ ಬರಮಾಡಿಕೊಂಡರು.

ಸಾದಹಳ್ಳಿ ಟೋಲ್ ಬಳಿ ಕ್ರೇನ್ ಮೂಲಕ ಎಚ್.ಡಿ.ಕುಮಾರಸ್ವಾಮಿಗೆ ಬೃಹತ್ ಹೂವು, ಸೇಬಿನ ಹಾರ ಹಾಕಲಾಯಿತು. ಕ್ರೇನ್ ಮೂಲಕ ಹೂವಿನ ಮಳೆ ಸುರಿಸಿ ಸ್ವಾಗತಿಸಲಾಯಿತು.

ಕೇಂದ್ರದಲ್ಲಿ ಮಂತ್ರಿಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಎಚ್.ಡಿ.ಕುಮಾರಸ್ವಾಮಿ ಅವರು ನೆರೆದಿದ್ದ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕೋಲಾರ ಸಂಸದ ಮಲ್ಲೇಶ್ ಬಾಬು, ಜಿ.ಟಿ.ದೇವೇಗೌಡ, ನಿಖಿಲ್ ಕುಮಾರಸ್ವಾಮಿ, ನಿಸರ್ಗ ನಾರಾಯಣಸ್ವಾಮಿ, ಇಂಚರ ಗೋವಿಂದರಾಜು, ಮುಳಬಾಗಿಲು ಸಮೃದ್ದಿ ಮಂಜುನಾಥ್, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಮುಖಂಡರು ಹಾಜರಿದ್ದರು.

ಕೇಂದ್ರದ ಎನ್‌.ಡಿ.ಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಶಾಸಕ ಬಿ.ಎನ್.ರವಿಕುಮಾರ್ ಇನ್ನಿತರೆ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು
ಕೇಂದ್ರದ ಎನ್‌.ಡಿ.ಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ಎಚ್.ಡಿ.ಕುಮಾರಸ್ವಾಮಿ ಅವರನ್ನು ಶಾಸಕ ಬಿ.ಎನ್.ರವಿಕುಮಾರ್ ಇನ್ನಿತರೆ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT