ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಪೂರೈಕೆಗೆ ಒತ್ತಾಯಿಸಿ ಗ್ರಾಮಸ್ಥರ ಪ್ರತಿಭಟನೆ

Last Updated 25 ಜುಲೈ 2020, 7:00 IST
ಅಕ್ಷರ ಗಾತ್ರ

ಗುಡಿಬಂಡೆ: ತಾಲ್ಲೂಕಿನ ಉಲ್ಲೋಡು ಗ್ರಾಮದಲ್ಲಿ ಮೂರು ದಿನಗಳಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ. ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಉಲ್ಲೋಡು ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದರು.

ಗ್ರಾಮದ ಯುವಕ ಮೂರ್ತಿ ಮಾತನಾಡಿ, ಕಳೆದ ಮೂರು ದಿನಗಳಿಂದ ನಮ್ಮ ಗ್ರಾಮದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜೊತೆಗೆ ವಾಟರ್‌ಮೆನ್ ಒಬ್ಬರನ್ನು ನೇಮಕ ಮಾಡುವಂತೆ ಒತ್ತಾಯಿಸುತ್ತಿದ್ದರೂ ಈ ಕುರಿತು ಗಮನಹರಿಸಿಲ್ಲ. ಇದರ ಜೊತೆಗೆ ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಪಿಡಿಒ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಭೀತಿ ಗ್ರಾಮದಲ್ಲಿ ಉಂಟಾಗಿದೆ ಎಂದು ಆರೋಪಿಸಿದರು.

ಗ್ರಾಮ ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌ ಸಮಿತಿ ರಚಿಸಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜನಪ್ರತಿನಿಧಿಗಳು, ಅಧಿಕಾರಿಗಳು ಹೇಳುತ್ತಾರೆ. ಆದರೆ ಇಲ್ಲಿವರೆಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿಲ್ಲ ಎಂದು ಆರೋಪಿಸಿದರು.

ಗ್ರಾಮದ ರವಿ, ಶ್ರೀನಾಥ, ಅರ್ಜುನ್‌ರೆಡ್ಡಿ, ನರಸಿಂಹಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT