ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವು ವಿರೋಧಿಗಳಲ್ಲ ಪಕ್ಷ ಕಟ್ಟಿದವರು

Last Updated 20 ಸೆಪ್ಟೆಂಬರ್ 2019, 6:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ನಾವು ಪಕ್ಷ ವಿರೋಧಿಗಳಲ್ಲ ಪಕ್ಷವನ್ನು ಗಟ್ಟಿಯಾಗಿ ಕಟ್ಟಿದವರು. ಸಮ್ಮಿಶ್ರ ಸರ್ಕಾರದಲ್ಲಿ ಕೆಲವರ ಮೇಲೆ ವಿಶೇಷ ಪ್ರೀತಿ ತೋರಿಸಲಾಯಿತು. ಕೆಲವರನ್ನು ದ್ವೇಷ ಮಾಡಲಾಯಿತು. ಎಲ್ಲರನ್ನೂ ಸಮಾನವಾಗಿ ಕಂಡಿದ್ದರೆ ನಾವು ರಾಜೀನಾಮೆ ನೀಡುತ್ತಿರಲಿಲ್ಲ. ಸಮ್ಮಿಶ್ರ ಸರ್ಕಾರ ಉಳಿಯುತ್ತಿತ್ತು’ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ಹೇಳಿದರು.


ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರದಲ್ಲಿ ಅನೇಕ ಶಾಸಕರ ಕ್ಷೇತ್ರಗಳಿಗೆ ಅನುದಾನವನ್ನೇ ನೀಡಲಿಲ್ಲ. ರಾಮನಗರ, ಮಂಡ್ಯದಲ್ಲಿ ವೈದ್ಯಕೀಯ ಕಾಲೇಜು ಇದ್ದಾಗಲೂ ಕನಕಪುರಕ್ಕೆ ವೈದ್ಯಕೀಯ ಕಾಲೇಜು ಯಾಕೆ ಬೇಕಿತ್ತು? ಕನಕಪುರಕ್ಕೆ₹450 ಕೋಟಿ ಕೊಟ್ಟಿದ್ದು ಯಾಕೆ? ಕೆಲವರು ಈಗ ತಾರತಮ್ಯ, ದ್ವೇಷದ ರಾಜಕಾರಣದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


‘ಸ್ಪೀಕರ್ ಆಗಿ ರಮೇಶಕುಮಾರ್ ನೀಡಿದ ತೀರ್ಪಿನ ವಿರುದ್ಧ ನ್ಯಾಯ ಪಡೆಯುವುದು ನಮ್ಮ ಮೂಲಭೂತ ಹಕ್ಕು. ಸುಪ್ರೀಂಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ನ್ಯಾಯ ಸಿಕ್ಕ ಬಳಿಕ ರಮೇಶ್ ಕುಮಾರ್ ಅವರ ಬಗ್ಗೆ ಮಾತನಾಡುತ್ತೇನೆ’ ಎಂದರು.


‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಹನಲ್ಲ ಎಂದು ನ್ಯಾಯಾಲಯ ಹೇಳಿಲ್ಲ. ನೇಮಕಾತಿ ಪ್ರಕ್ರಿಯೆಯಲ್ಲಿ ನಿಯಮ ಪಾಲನೆಯಾಗಿಲ್ಲ ಎಂದು ಅಭಿಪ್ರಾಯಪಟ್ಟಿದೆ. ನ್ಯಾಯಾಲಯದ ಆದೇಶ ಏನೇ ಬಂದರೂ ನನ್ನ ನೇಮಕ ಮುಂದುವರೆಸುವುದು, ಸ್ಥಗಿತಗೊಳಿಸುವುದು ಸರ್ಕಾರಕ್ಕೆ ಬಿಟ್ಟ ವಿಚಾರ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT