ಕೆರೆಯಲ್ಲಿ ಮುಳುಗಿ ಮಹಿಳೆ, ಬಾಲಕ ಸಾವು
ಚಿಂತಾಮಣಿ: ತಾಲ್ಲೂಕಿನ ಕೋಟಗಲ್ ಗ್ರಾಮದ ಕೆರೆಯಲ್ಲಿ ಶುಕ್ರವಾರ ಬಟ್ಟೆ ತೊಳೆಯಲು ಹೋಗಿದ್ದ
ಮಹಿಳೆ ಹಾಗೂ ಬಾಲಕ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಕೋಟಗಲ್ ಗ್ರಾಮದ ವೆಂಕಟರಾಜು ಅವರ ಪುತ್ರ ಗಗನ್(11) ಹಾಗೂ ನಾದಿನಿ ಅನಿತಾ(25) ಮೃತಪಟ್ಟವರು. ಶುಕ್ರವಾರ ಸಂಜೆ ಕೆರೆಯಲ್ಲಿ ಅನಿತಾ ಬಟ್ಟೆ ಒಗೆಯಲು ಹೋಗಿದ್ದರು. ಜತೆಯಲ್ಲಿ ಬಾಲಕ ಗಗನ್
ಸಹ ಇದ್ದನು. ಅನಿತಾ ಬಟ್ಟೆ ಒಗೆಯುತ್ತಿದ್ದಾಗ ಗಗನ್ ಆಟವಾಡುತ್ತಿದ್ದನು. ಗಗನ್ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಅನಿತಾ ಸಹ ನೀರಿನಿಂದ ಮೇಲೆ ಬರಲಾರದೆ ಸಾವನ್ನಪ್ಪಿದ್ದಾರೆ.
ಗ್ರಾಮಾಂತರ ಠಾಣೆ ಪೊಲೀಸರು ಸ್ಥಳೀಯರ ನೆರವಿನಿಂದ
ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಶಾಸಕ ಎಂ.ಕೃಷ್ಣಾರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.