ಚಿಕ್ಕಬಳ್ಳಾಪುರ: ನಗರದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಟಿಇಸಿಎಸ್ಒಕೆ ಸಂಸ್ಥೆ ಸಹಯೋಗದಲ್ಲಿ ಭಾರತ ಸರ್ಕಾರದ ರ್ಯಾಂಪ್ ಯೋಜನೆಯಡಿ ಜಿಲ್ಲೆಯಲ್ಲಿನ ಎಂಎಸ್ಎಂಇ ಉದ್ದಿಮೆದಾರರಿಗೆ ಟಿಆರ್ಇಡಿಎಸ್ ಯೋಜನೆ ಕುರಿತು ಗುರುವಾರ ಒಂದು ದಿನದ ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಸರ್ ಎಂ. ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಅಧ್ಯಕ್ಷ ಎಚ್.ಆರ್. ಗೋವಿಂದರಾಜ್ ಮಾತನಾಡಿ, ‘ಜಿಲ್ಲೆಯ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆದಾರರು ಬಾಕಿ ಹಣ ವಿಳಂಬ ಸೇರಿದಂತೆ ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಉದ್ದಿಮೆಗಳ ಕಾರ್ಯಾಚರಣೆಗೆ ತೊಂದರೆಯಾಗದಂತೆ ಟಿಆರ್ಇಡಿಎಸ್ ಡಿಜಿಟಲ್ ವೇದಿಕೆಯಲ್ಲಿ ನೋಂದಾಯಿಸಿಕೊಳ್ಳುವಂತೆ’ ಸಲಹೆ ನೀಡಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಕೆ.ಶಿವಲಿಂಗಯ್ಯ ಮಾತನಾಡಿ, ಉದ್ದಿಮೆ ಸ್ಥಾಪಿಸಲು ಭಾರತ ಸರ್ಕಾರದ ರ್ಯಾಂಪ್ ಯೋಜನೆ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಕುರಿತು ಇರುವ ಅವಕಾಶ ಮತ್ತು ಸೌಲಭ್ಯಗಳ ಬಗ್ಗೆ ಮಾತನಾಡಿದರು. ಭಾರತ ಸರ್ಕಾರದ ಯೋಜನೆಗಳನ್ನು ಉದ್ದಿಮೆದಾರರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಬೆಂಗಳೂರು ಟಿಇಸಿಎಸ್ಒಕೆ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಶರತ್ ಬಾಬು ಮಾತನಾಡಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಎಸ್.ಸಿ/ಎಸ್.ಟಿ ಉದ್ದಿಮೆದಾರರ ಸಂಘದ ಜಿಲ್ಲಾ ಪ್ರತಿನಿಧಿ ಎಂ.ನರಸಿಂಹ, ಬೆಂಗಳೂರು ಟಿ.ಇ.ಸಿ.ಎಸ್.ಒ.ಕೆ ಸಂಸ್ಥೆಯ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಹಾಗೂ ಮುಖ್ಯ ಸಲಹೆಗಾರ ಸಿದ್ದರಾಜು, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ವಿರೂಪಾಕ್ಷ, ಬಾಬಾಸಾಬ್, ಬಿ. ಶ್ರೀನಿವಾಸರೆಡ್ಡಿ, ಟಿ.ಮುಕುಂದ, ಎಲ್. ಮಂಜುನಾಥ್, ಶಾಜೀಯ ಖಾನಂ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.