ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವ ಸಮಾಜ ನಿರ್ಮಾಣಕ್ಕೆ ಸಲಹೆ

ಬಿಜೆಪಿ ಕಚೇರಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ
Last Updated 9 ಮಾರ್ಚ್ 2021, 3:19 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಮಹಿಳೆಯರು ರಾಜಕೀಯ, ಶೈಕ್ಷಣಿಕ, ಸಾಮಾಜಿಕವಾಗಿ ಬೆಳೆದು, ನವ ಸಮಾಜ ಕಟ್ಟುವಂತರಾಗಬೇಕು’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ದೀಪಿಕಾ ಮಂಜುನಾಥ್ ಸಲಹೆ ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು, ಹೆಣ್ಣುಮಕ್ಕಳನ್ನು ಮನೆಗಳಿಗೆ ಸೀಮಿತರನ್ನಾಗಿ ಮಾಡಿದ್ದಾರೆ. ಮಹಿಳೆಯರು ಎಲ್ಲಾ ರಂಗಗಳಲ್ಲಿ ಇದ್ದಾರೆ. ಶಿಕ್ಷಣ, ಉದ್ಯೋಗ ಪಡೆದು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಿಳೆಯರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವರು ತೆರೆಮರೆಯಲ್ಲಿ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇಂದಿಗೂ ಮಹಿಳೆಯರ, ಹೆಣ್ಣುಮಕ್ಕಳ ಮೇಲೆ ನಿರಂತರವಾಗಿ ಶೋಷಣೆ ನಡೆಯುತ್ತಿರುವುದು ದುರಂತ ಎಂದು ತಿಳಿಸಿದರು.

ಮಹಿಳೆಯರಿಗೆ ಹಕ್ಕು ಹಾಗೂ ಕಾನೂನುಗಳು ಇವೆ. ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಆಗಬೇಕು. ಜನಸೇವಕರಾಗಿ ಕೆಲಸ ಮಾಡಲು ಅವಕಾಶಗಳನ್ನು ಕಲ್ಪಿಸಿಕೊಡಬೇಕು. ಮಹಿಳೆಯರಿಗೆ ಉದ್ಯೋಗಗಳಲ್ಲಿ ಮೀಸಲಾತಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಲಕ್ಷ್ಮಮ್ಮ, ಧರ್ಮಪುತ್ರಿ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಮತಾ, ಬಿಜೆಪಿ ಮಂಡಲ ಅಧ್ಯಕ್ಷ ಆರ್. ಪ್ರತಾಪ್, ಮಹಿಳಾ ಘಟಕದ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಕಾರ್ಯದರ್ಶಿ ಪಿ.ಎನ್. ವನಜಾ, ಜಿಲ್ಲಾ ಕಾರ್ಯದರ್ಶಿ ಮಂಜುಳಾಬಾಯಿ, ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ, ಸರ್ವಮಂಗಳಾ, ಮಂಜುಳಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT