ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಗೆ ಸೀಮಿತವಾದ ಯೋಗ ದಿನ

ಕೋವಿಡ್ ಕಾರಣಕ್ಕೆ ಸಾರ್ವಜನಿಕವಾಗಿ ಯೋಗ ದಿನ ಆಚರಣೆ ನಿರ್ಬಂಧಿಸಿದ ಆಯುಷ್ ಮಂತ್ರಾಲಯ
Last Updated 21 ಜೂನ್ 2020, 9:35 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೋವಿಡ್ ಕಾರಣಕ್ಕೆ ಭಾನುವಾರ ಯೋಗ ಪ್ರಿಯರು ಮನೆಗಳಲ್ಲಿಯೇ ಯೋಗಾಭ್ಯಾಸ ಮಾಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಿದರು.

ಪ್ರತಿ ವರ್ಷ ಅಂತರರಾಷ್ಟ್ರೀಯ ಯೋಗ ದಿನವನ್ನು ಕೇಂದ್ರಿಯ ಯೋಗ ಸೇವಾ ಪ್ರಾಕೃತಿಕ ಚಿಕಿತ್ಸಾ ಅನುಸಂಧಾನ ಪರಿಷತ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿತ್ತು.

ಆದರೆ, ಈ ಬಾರಿ ಕೋವಿಡ್‌ ಸೋಂಕು ಹರಡುವುದು ತಡೆಗಟ್ಟುವ ನಿಟ್ಟಿನಲ್ಲಿ ಆಯುಷ್ ಮಂತ್ರಾಲಯ ಸಾರ್ವಜನಿಕವಾಗಿ ಯೋಗ ದಿನ ಆಚರಣೆ ನಿಷೇಧಿಸುವ ಜತೆಗೆ, ‘ಮನೆಯಿಂದಲೇ ಯೋಗ’ ಎಂಬ ಘೋಷ ವಾಕ್ಯ ನೀಡಿತ್ತು. ಹೀಗಾಗಿ, ನಾಗರಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು ಮನೆಯಲ್ಲಿಯೇ ಯೋಗಾಭ್ಯಾಸ ಮಾಡಿದರು.

ಪತಂಜಲಿ ಯೋಗ ಸಮಿತಿ ಮತ್ತು ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ, ಭಾರತ ಸ್ವಾಭಿಮಾನ್ ಮತ್ತು ಕಿಸಾನ್ ಪಂಚಾಯತ್‌ ಸಂಘಟನೆಗಳ ಸದಸ್ಯರು ತಾಲ್ಲೂಕಿನ ನಂದಿ ಸಮೀಪದ ಗೋವರ್ಧನ ಗಿರಿ ಬೆಟ್ಟದಲ್ಲಿ ಸಾಮೂಹಿಕ ಯೋಗಾಭ್ಯಾಸ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT