ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯಕೀಯ ಶಿಕ್ಷಣದಲ್ಲಿ ಯೋಗ ವಿಜ್ಞಾನ

ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ
Last Updated 15 ಫೆಬ್ರುವರಿ 2020, 14:02 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ವೈದ್ಯಕೀಯ ಶಿಕ್ಷಣ ಪಠ್ಯಕ್ರಮದಲ್ಲಿ ಯೋಗ ವಿಜ್ಞಾನ ಅಳವಡಿಸುವ ಚಿಂತನೆ ಇದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇವತ್ತು ಎಲ್ಲ ಕ್ಷೇತ್ರದವರಲ್ಲೂ ಒತ್ತಡ ಹೆಚ್ಚಾಗುತ್ತಿದೆ. ಅದನ್ನು ನಿವಾರಿಸುವ ಬಗೆ ಕಂಡುಕೊಳ್ಳುವ ಅಗತ್ಯವಿದೆ. ಅದಕ್ಕಾಗಿ ಯೋಗ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದ ತಜ್ಞರನ್ನು ಒಳಗೊಂಡ ತಂಡ ರಚಿಸಿ, ಪಠ್ಯಕ್ರಮ ರೂಪಿಸುವ ಬಗ್ಗೆ ಚರ್ಚೆ ನಡೆದಿದೆ’ ಎಂದು ತಿಳಿಸಿದರು.

‘ಜಾಗತಿಕ ಮಟ್ಟದ ವೈದ್ಯಕೀಯ ಶಿಕ್ಷಣ ನಮ್ಮಲ್ಲಿ ಸಿಗಬೇಕು ಎನ್ನುವುದು ನಮ್ಮ ಆದ್ಯತೆ. ಆದ್ದರಿಂದ ವಿಶ್ವದಲ್ಲಿರುವ ವಿವಿಧ ಉತ್ತಮ ವೈದ್ಯಕೀಯ ಪದ್ಧತಿಗಳನ್ನು ನಮ್ಮ ಪಠ್ಯಕ್ರಮದಲ್ಲಿ ಅಳವಡಿಸಿ, ರಾಜ್ಯದಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT